ಪ್ರಚೋದನಕಾರಿ ಹೇಳಿಕೆ ನೀಡುವ ಸ್ವಪಕ್ಷೀಯರಿಗೆ ಯಡಿಯೂರಪ್ಪ ಕಡಿವಾಣ ಹಾಕಲಿ: ಹೆಚ್.ಡಿ.ಕುಮಾರಸ್ವಾಮಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾಳಿರುವ ನಿಲುವಿನ ಬಗ್ಗೆ ಅವರ ಪಕ್ಷದ ಕೆಲವು ಜನಪ್ರತಿನಿಧಿಗಳು ಪ್ರಚೋದನಕಾರಿ ಮತ್ತು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಇಂತಹವುಗಳಿಗೆ ಕಡಿವಾಣ ಹಾಕಬೇಕು ಎಂದು ಮಾಜಿ  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಕುಮಾರಸ್ವಾಮಿ
ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾಳಿರುವ ನಿಲುವಿನ ಬಗ್ಗೆ ಅವರ ಪಕ್ಷದ ಕೆಲವು ಜನಪ್ರತಿನಿಧಿಗಳು ಪ್ರಚೋದನಕಾರಿ ಮತ್ತು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಇಂತಹವುಗಳಿಗೆ ಕಡಿವಾಣ ಹಾಕಬೇಕು ಎಂದು ಮಾಜಿ  ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಸಮುದಾಯಗಳ ನಡುವೆ ಪರಸ್ಪರ ಸಂಘರ್ಷಕ್ಕೆ ಪ್ರಚೋದಿಸುವ ದುಷ್ಕರ್ಮಿಗಳ ವಿರುದ್ಧ ಮುಖ್ಯಮಂತ್ರಿಗಳು ತಾಳಿರುವ ದೃಢ ನಿಲುವು ಸೂಕ್ತ ಮತ್ತು ಸ್ವಾಗತಾರ್ಹ. ಆದರೆ ಅವರ ಸ್ಪಷ್ಟ ಎಚ್ಚರಿಕೆಯ ನಂತರವೂ ಅನೇಕ ಮಾಧ್ಯಮಗಳು ಸಂಕುಚಿತ  ಮನೋಭಾವನೆಯಿಂದ ದ್ವೇಷಕಾರಿಕೊಳ್ಳುತ್ತಿವೆ. ಇಂತಹ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು  ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

'ಹಿಂದೆಂದೂ ಕಂಡರಿಯದ ರಾಷ್ಟ್ರೀಯ ಅರೋಗ್ಯ ಸಂಕಟದ ಈ ದಿನಗಳಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ. ಅಪರಾಧಿಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸದೇ ಹೋದರೆ ರಾಜ್ಯವೇ ಕೋಮುದಳ್ಳುರಿಗೆ ಬಲಿಯಾಗುವ ಅಪಾಯ ತಪ್ಪಿದ್ದಲ್ಲ. ಪ್ರಿಂಟ್, ಟಿವಿ ಮತ್ತು  ಸಾಮಾಜಿಕ ಜಾಲತಾಣಗಳ ಮೂಲಕ ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ. ನೀವು ತಳೆದ ನಿಲುವಿನ ಬಗ್ಗೆ ನಿಮ್ಮದೇ ಪಕ್ಷದ  ಕೆಲವು ಜನಪ್ರತಿನಿಧಿಗಳು ಪ್ರಚೋದನಕಾರಿ ಮತ್ತು ವ್ಯತಿರಿಕ್ತ  ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳಾದ ನೀವು ಇಂತಹವುಗಳಿಗೂ ಕಡಿವಾಣ ಹಾಕಬೇಕಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com