ಕೊವಿಡ್-19: ಹೊಸ ಜಿಲ್ಲೆಗಳಿಗೆ ಇಂದೇ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ- ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಮಾರಕ ಕೊರೋನಾ ನಿಯಂತ್ರಣ ಮತ್ತು ಜಿಲ್ಲಾ ಉಸ್ತುವಾರಿಗಾಗಿ, ಈವರೆಗೆ ಉಸ್ತುವಾರಿ ಇಲ್ಲದ ಎಲ್ಲ ಜಿಲ್ಲೆಗಳಿಗೆ ಇಂದೇ ಸಚಿವರನ್ನು ನೇಮಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ನಿಯಂತ್ರಣ ಮತ್ತು ಜಿಲ್ಲಾ ಉಸ್ತುವಾರಿಗಾಗಿ, ಈವರೆಗೆ ಉಸ್ತುವಾರಿ ಇಲ್ಲದ ಎಲ್ಲ ಜಿಲ್ಲೆಗಳಿಗೆ ಇಂದೇ ಸಚಿವರನ್ನು ನೇಮಿಸುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಿದ್ದಾರೆಂದು ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡಲಾಗಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಎಚ್ಚರ ವಹಿಸಲಾಗಿದೆ. ಮಳೆ ಆರಂಭವಾಗಿರುವುದರಿಂದ ರೈತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಂಕಷ್ಟದಲ್ಲಿರುವ ಹೂವು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವ ಸಂಬಂಧ ಸಮೀಕ್ಷೆ ನಡೆಸಲು, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ಯಾರೊಬ್ಬರೂ ಸಹ ಹಸಿವಿನಿಂದಿರಬಾರದು. ಈ ನಿಟ್ಟಿನಲ್ಲಿ ಎಲ್ಲ ಕ್ರಮ ತೆಗೆದುಕೊಳ್ಳಲಾಗಿದೆ. ಇದರೊಂದಿಗೆ ಉಸ್ತುವಾರಿ ಸಚಿವರಿಲ್ಲದ ಜಿಲ್ಲೆಗಳಿಗೆ ಇಂದು ಸಂಜೆಯೊಳಗೆ ಸಚಿವರನ್ನು ನೇಮಿಸಲಾಗುತ್ತದೆ. ಈ ಕುರಿತು ಪಟ್ಟಿ ಸಿದ್ದಪಡಿಸಲಾಗುತ್ತಿದೆ ಎಂದರು.

ಇನ್ನು ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದ್ದು, ಬೆಂಗಳೂರಿನಲ್ಲಿ ಲಾಕ್ ಡೌನ್ ಉಲ್ಲಂಘಿಸಿದ 10 ಸಾವಿರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜನತೆ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ತೀರ್ಮಾನ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದೂ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com