ಕೊರೋನಾ ಔಷಧಿ, ಉಪಕರಣ ಖರೀದಿ ಅಕ್ರಮದ ಬಗ್ಗೆ ಕಾಂಗ್ರೆಸ್ ಪ್ರಶ್ನೆ ಬಳಿಕ ಲೂಟಿ ನಿಯಂತ್ರಣಕ್ಕೆ: ಸಿದ್ದರಾಮಯ್ಯ

ಕೊರೋನಾ ಔಷಧಿ, ಉಪಕರಣ ಖರೀದಿ ಅಕ್ರಮ ಸಂಬಂದ  ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಸರ್ಕಾರದಲ್ಲಿ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಯಡಿಯೂರಪ್ಪ-ಸಿದ್ದರಾಮಯ್ಯ
ಯಡಿಯೂರಪ್ಪ-ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಔಷಧಿ, ಉಪಕರಣ ಖರೀದಿ ಅಕ್ರಮ ಸಂಬಂದ  ಬಹಿರಂಗವಾಗಿ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಸರ್ಕಾರದಲ್ಲಿ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿಯ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಅಕ್ರಮಕಾರರ ಹೊಟ್ಟೆಗೆ ಕಲ್ಲು ಹಾಕಿದನಲ್ಲಾ ಎಂದು ಇವರಿಗೆಲ್ಲ ನನ್ನ ಮೇಲೆ ಕೋಪ. ಅದಕ್ಕಾಗಿ ನನ್ನ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಲೇವಡಿ ಮಾಡಿದ್ದಾರೆ.

ಅಕ್ರಮ ಪ್ರಶ್ನಿಸಿದ ನಮಗೆ ವಕೀಲರ ಮೂಲಕ ನೋಟೀಸ್ ಕೊಟ್ಟು ಬಿಜೆಪಿ ಸರ್ಕಾರ ನಮ್ಮ‌ ಕೆಲಸವನ್ನು ಸುಲಭ‌ ಮಾಡಿದೆ.ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೆವು. ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಲೇಬೇಕಲ್ಲಾ? ಕೋರ್ಟ್ ನಲ್ಲಿ ಯಾದರೂ ನಮ್ಮನ್ನು ಎದುರಿಸಲೇ ಬೇಕಲ್ಲಾ?  ಎಂದು ಅವರು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com