ಕಾಂಗ್ರೆಸ್‌ನವರು ಅತ್ತೂ ಕರೆದು ಐತಿಹಾಸಿಕ ಕ್ಷಣದ ಭಾಗವಾಗಲು ಪ್ರಯತ್ನಿಸುತ್ತಿದ್ದಾರೆ: ಸದಾನಂದಗೌಡ ಟೀಕಾಪ್ರಹಾರ

ಅಯೋಧ್ಯೆಯಲ್ಲಿ ಬುಧವಾರ ಆಯೋಜಿಸಿರುವ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಲಿ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಶುಭ ಹಾರೈಸಿದ್ದಾರೆ.
ಸದಾನಂದ ಗೌಡ
ಸದಾನಂದ ಗೌಡ

ಬೆಂಗಳೂರು: ಅಯೋಧ್ಯೆಯಲ್ಲಿ ಬುಧವಾರ ಆಯೋಜಿಸಿರುವ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಲಿ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಶುಭ ಹಾರೈಸಿದ್ದಾರೆ.

ಕೋಟ್ಯಂತರ ಭಾರತೀಯರು ಎದುರು ನೋಡುತ್ತಿದ್ದ ಶುಭಘಳಿಗೆ ಸಮೀಪಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆಯೋಧ್ಯೆ ಆಂದೋಲನದಲ್ಲಿ ಪ್ರಮುಖ ಪಾತ್ರವಹಿಸಿದ್ದ ಪಕ್ಷದ ಹಿರಿಯ ನಾಯಕ ಮಾಜಿ ಉಪಪ್ರಧಾನಿ ಲಾಲ್‌ಕೃಷ್ಣ ಅಡ್ವಾಣಿ, ಬಿಜೆಪಿ ಮಾಜಿ ಅಧ್ಯಕ್ಷ ಡಾ.ಮುರಳಿ ಮನೋಹರ ಜೋಷಿ ಮುಂತಾದ ಹಿರಿಯ ನಾಯಕರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಸಚಿವರು ಇಂದು ಇಲ್ಲಿ ಮಾಧ್ಯಮ ಹೇಳಿಕೆಯೊಂದರಲ್ಲಿ ತಿಳಿಸಿದರು.

ಮರ್ಯಾದಾ ಪುರುಷೋತ್ತಮ ರಾಮಚಂದ್ರ ಭಾರತೀಯರ ಆರಾಧ್ಯದೈವ. ನಮ್ಮಂತಹ ಕೋಟ್ಯಂತರ ಶ್ರದ್ಧಾಳುಗಳು ಪ್ರಾರ್ಥನೆ ಫಲಿಸುವ ಕ್ಷಣ ಬಂದೇ ಬಿಟ್ಟಿದೆ. ಅಯೋಧ್ಯೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. 

ರಾಮಮಂದಿರ ಪುನರ್ ನಿರ್ಮಾಣದ ಶಿಲಾನ್ಯಾಸಕ್ಕೆ ವೇದಿಕೆ ಸಜ್ಜುಗೊಂಡಿದೆ. ಸಾಮಾನ್ಯ ಪರಿಸ್ಥಿತಿಯಲ್ಲಿಯಾಗಿದ್ದರೆ ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಅಯೋಧ್ಯೆಯಲ್ಲಿ ಲಕ್ಷೋಪಲಕ್ಷ ಜನರು ಸೇರುತ್ತಿದ್ದರು. ಆದರೆ ಕೊರೊನಾ ಸಾಂಕ್ರಾಮಿಕ ರೋಗದ ಪರಿಣಾಮವಾಗಿ ಸರಳವಾಗಿ ಕೆಲವೇ ಕೆಲವು ಆಯ್ದ ಜನರ ಸಮ್ಮುಖದಲ್ಲಿ ಶಿಲಾನ್ಯಾಸ ನಡೆಯಲಿದೆ. ಈ ಕಾರ್ಯಕ್ರಮ ಅತ್ಯಂತ ಯಶಸ್ವಿತಯಾಗಿ ನಡೆಯಲಿ ಎಂದು ಹಾರೈಸುತ್ತೇನೆ ಎಂದು ಸಚಿವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com