ಮೂರು ಪಕ್ಷಗಳೂ ಕೊಡಗಿಗೆ ಶಾಶ್ವತ ಪರಿಹಾರ ಯೋಜನೆ ರೂಪಿಸುವಲ್ಲಿ ವಿಫಲ: ಡಿಕೆ ಶಿವಕುಮಾರ್

ರಾಜ್ಯಕ್ಕೆ ಕಿರೀಟದಂತಿರುವ ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರಾಕೃತ್ತಿಕ ವಿಕೋಪ ಸಂಬಂಧಿತ  ರಾಜಕೀಯ ಭೇದ ಮರೆತು ಎಲ್ಲಾ ಪಕ್ಷಗಳ ನಾಯಕರು ಒಂದಾಗಿ ಶಾಶ್ವತವಾದ ಪರಿಹಾರ ಕ್ರಮಗಳ ಯೋಜನೆಯನ್ನು ಸಕಾ೯ರದ ಮೂಲಕ ಜಾರಿಗೊಳಿಸಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

Published: 09th August 2020 08:34 PM  |   Last Updated: 09th August 2020 08:34 PM   |  A+A-


DK Shivakumar

ಡಿಕೆ ಶಿವಕುಮಾರ್

Posted By : Vishwanath S
Source : UNI

ಮಡಿಕೇರಿ: ರಾಜ್ಯಕ್ಕೆ ಕಿರೀಟದಂತಿರುವ ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರಾಕೃತ್ತಿಕ ವಿಕೋಪ ಸಂಬಂಧಿತ  ರಾಜಕೀಯ ಭೇದ ಮರೆತು ಎಲ್ಲಾ ಪಕ್ಷಗಳ ನಾಯಕರು ಒಂದಾಗಿ ಶಾಶ್ವತವಾದ ಪರಿಹಾರ ಕ್ರಮಗಳ ಯೋಜನೆಯನ್ನು ಸಕಾ೯ರದ ಮೂಲಕ ಜಾರಿಗೊಳಿಸಬೇಕಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ದೇಶಕ್ಕೆ ಅಪ್ರತಿಮ ಸೈನಿಕರನ್ನು ನೀಡಿದ, ಜೀವನದಿ ಕಾವೇರಿಯ ತವರು, ಕನಾ೯ಟಕ ರಾಜ್ಯಕ್ಕೆ ವಿಲೀನಗೊಂಡ ಸಂದಭ೯ದ ಅಂದಿನ ಸಂದಭ೯ದಲ್ಲಿಯೇ 10 ಲಕ್ಷ ರೂ. ತೆರಿಗೆ ನೀಡಿದ ಕೊಡಗಿನ ರಕ್ಷಣೆಗೆ ಎಲ್ಲರೂ  ಮುಂದಾಗಬೇಕಾಗಿದೆ. ನಾಡಿಗೆ ಮಳೆ ಅಗತ್ಯವಾಗಿದೆ. ಆದರೆ ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಡೆಗಟ್ಟಲೇಬೇಕಾಗಿದೆ. ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಯೋಜನೆ ರೂಪಿಸುತ್ತೇವೆ ಎಂದು ಹೇಳಿದರು.

ಕಳೆದ ವಷ೯ ರಾಜ್ಯದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೇ ಇನ್ನೂ ರಾಜ್ಯ ಸಕಾ೯ರ ಭರವಸೆ ನೀಡಿದ್ದ ಪರಿಹಾರ ಇನ್ನೂ ನೀಡಿಲ್ಲ. ಶಾಸಕರು, ಸಂಸದರಿಗೆ ಈ ಬಗ್ಗೆ ಪ್ರಶ್ನಿಸಲೂ ಸಾಧ್ಯವಾಗದ ಅಸಹಾಯಕ ಸ್ಥಿತಿಯಿದೆ. ರಾಜ್ಯದಲ್ಲಿ ಕೋರೋನಾ ಮತ್ತು ಮಳೆಹಾನಿ ಪರಿಸ್ಥಿತಿಯನ್ನು ಸಮಥ೯ವಾಗಿ ನಿವ೯ಹಿಸುವಲ್ಲಿ ಸಕಾ೯ರ ಸಂಪೂಣ೯ ವಿಫಲವಾಗಿದೆ ಎಂದೂ ಶಿವಕುಮಾರ್ ಆರೋಪಿಸಿದರು.

Stay up to date on all the latest ರಾಜಕೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp