224 ಶಾಸಕರಿಗೂ ರಕ್ಷಣೆ ನೀಡುವುದು ಸರ್ಕಾರದ ಕರ್ತವ್ಯ: ನಿಮ್ಮ ವೈಫಲ್ಯಕ್ಕೆ ಬೇರೆಯವರನ್ನು ಪ್ರಶ್ನಿಸಿದರೆ ಹೇಗೆ ಸ್ವಾಮಿ?

ಶ್ರೀಯುತ ಬಿಎಲ್ ಸಂತೋಷ್ ಅವರೇ, ರಾಜ್ಯದ 224 ಶಾಸಕರಿಗೂ ರಕ್ಷಣೆ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೇ ಸರ್ಕಾರಗಳಿವೆ, ಪೊಲೀಸ್ ಇಲಾಖೆ ನಿಮ್ಮ ಅಧೀನದಲ್ಲಿದೆ.

Published: 13th August 2020 12:36 PM  |   Last Updated: 13th August 2020 12:41 PM   |  A+A-


DJ Halli mob

ಡಿಜೆ ಹಳ್ಳಿ ಹಿಂಸಾಚಾರ

Posted By : shilpa
Source : Online Desk

ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ಸರಣಿ ಟ್ವೀಟ್ ಮಾಡಿದ್ದಾರೆ. ಪ್ರವಾದಿ ಮಹಮ್ಮದ್ ಪೈಗಂಬರರನ್ನು ವ್ಯಕ್ತಿಯೊಬ್ಬ ನಿಂದಿಸಿರುವುದು ವೈಯಕ್ತಿಕವಾಗಿ ನನಗೂ ಸಾಕಷ್ಟು ನೋವಾಗಿದೆ. ನಮ್ಮ ನೋವು, ಆಕ್ರೋಶವನ್ನು ಕಾನೂನು ಹೋರಾಟದ ಮೂಲಕದ ತೋರಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಬೇಕೇ ಹೊರತು ಅಶಾಂತಿಯ ಮೂಲಕವಲ್ಲ. ನ್ಯಾಯಕ್ಕಾಗಿ ನಡೆಸುವ ಕಾನೂನು ಹೋರಾಟದಲ್ಲಿ ನಾನೂ ನಿಮ್ಮ ಜೊತೆಗಿರುತ್ತೇನೆ’ ಎಂದಿದ್ದಾರೆ.

ಶ್ರೀಯುತ ಬಿಎಲ್ ಸಂತೋಷ್ ಅವರೇ, ರಾಜ್ಯದ 224 ಶಾಸಕರಿಗೂ ರಕ್ಷಣೆ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೇ ಸರ್ಕಾರಗಳಿವೆ, ಪೊಲೀಸ್ ಇಲಾಖೆ ನಿಮ್ಮ ಅಧೀನದಲ್ಲಿದೆ. ನಿಮ್ಮ ವೈಫಲ್ಯಕ್ಕೆ ಬೇರೆಯವರನ್ನು ಪ್ರಶ್ನಿಸಿದರೆ ಹೇಗೆ ಸ್ವಾಮಿ?  ಎಂದು ಪ್ರಶ್ನಿಸಿದ್ದಾರೆ.

‘ಬೆಂಗಳೂರಿನಲ್ಲಿನ ಹಿಂಸಾಚಾರ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಧಾರ್ಮಿಕ ಮುಖಂಡರೊಂದಿಗೆ ಚರ್ಚೆ ಮಾಡಿದ್ದೇನೆ. ತಪ್ಪಿತಸ್ಥರಿಗೆ ಖಂಡಿತಾ ಕಠಿಣ ಶಿಕ್ಷೆ ಆಗಲಿದೆ. ಗಾಳಿ ಸುದ್ದಿಗಳಿಗೆ ಕಿವಿ ಕೊಡಬೇಡಿ, ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯುವ ನಮ್ಮ ನಿರ್ಧಾರ ಅಚಲವಾಗಿರಲಿ. ಶಾಂತಿ, ಸೌಹಾರ್ದತೆಗೆ ಎಲ್ಲರೂ ಸಹಕರಿಸುವಂತೆ ಕೈ ಮುಗಿದ್ದು ಮನವಿ ಮಾಡುತ್ತೇನೆ’ ಎಂದು ಜಮೀರ್​ ಅಹ್ಮದ್​ ಸರಣಿ ಟ್ವೀಟ್​ ಮಾಡಿದ್ದಾರೆ.
 


Stay up to date on all the latest ರಾಜಕೀಯ news
Poll
CBSE board exam

12 ನೇ ತರಗತಿ ಮೌಲ್ಯಮಾಪನಕ್ಕೆ 10 ನೇ ತರಗತಿ ಅಂಕಗಳನ್ನು ಸೇರಿಸುವ ಸಿಬಿಎಸ್‌ಇ ಸೂತ್ರವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
flipboard facebook twitter whatsapp