ಅಖಂಡ ಶ್ರೀನಿವಾಸಮೂರ್ತಿ ಮೇಲೆ ಬಿಜೆಪಿಯಿಂದ ಒತ್ತಡ: ಡಿ.ಕೆ.ಶಿವಕುಮಾರ್ 

ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಇದೇ ರೀತಿ ಹೇಳಿಕೆ ನೀಡುವಂತೆ ಅವರ ಒತ್ತಡ ಹೇರಲಾಗುತ್ತಿದೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಇದೇ ರೀತಿ ಹೇಳಿಕೆ ನೀಡುವಂತೆ ಅವರ ಒತ್ತಡ ಹೇರಲಾಗುತ್ತಿದೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು 74ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ, ಗಲಭೆ ವಿಚಾರದಲ್ಲಿ ಬಿಜೆಪಿ ಏನು ಮಾಡುತ್ತಿದೆ ಎಂಬುದು ತಮಗೆ ಗೊತ್ತಿದೆ. ಬಿಜೆಪಿಯ ಒತ್ತಡ ಬೆದರಿಕೆಯನ್ನು ತಾವು ಸಹಿಸುವುದಿಲ್ಲ ಎಂದರು.

ಕಾಂಗ್ರೆಸ್​ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಆದರೆ, ಬಿಜೆಪಿಯೊಳಗೆ ಸಾಕಷ್ಟು ಆಂತರಿಕ ಕಚ್ಚಾಟ ಇದೆ. ಬಿಜೆಪಿಯವರ ಒಳ ತಂತ್ರದಿಂದಲೇ ಕಾವಲಭೈರಸಂದ್ರ  ಗಲಭೆ ನಡೆದಿದ್ದು ಎಂದು ಡಿಕೆಶಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸಹ ಈ  ಘಟನೆ ಬಗ್ಗೆ ಆಂತರಿಕ ತನಿಖೆ ಮಾಡಲಿದೆ. ಆದರೆ ಬಿಜೆಪಿಯವರು ನಮ್ಮ ಕಾರ್ಪೊರೇಟರ್​ಗಳನ್ನು ಪೊಲೀಸರಿಂದ ಹೆದರಿಸ್ತಿದ್ದಾರೆ ಎಂದು ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಇದೇ ಹೇಳಿಕೆ ಕೊಡಬೇಕು ಅಂತ ಅಖಂಡ ಶ್ರೀನಿವಾಸ್ ಮೂರ್ತಿ ಮೇಲೆ ಒತ್ತಡ ಹಾಕಿದ್ದಾರೆ.  ಅದೆಲ್ಲ ನಮಗೆ ಗೊತ್ತಿದೆ. ನಾವು ಇದನ್ನು ಸಹಿಸಲ್ಲ. ಏನೇನು ನಡೀತಿದೆ ಅಂತ ನಮಗೆ ಗೊತ್ತಿದೆ. ಇವರು ಅಧಿಕಾರಕ್ಕೆ ಬಂದಾಗಲೆಲ್ಲ ಕೋಮು ಗಲಭೆ ನಡೆಯುತ್ತೆ. ಈ ಸರ್ಕಾರದಲ್ಲಿ ಒಬ್ಬ ಸಚಿವ, ಶಾಸಕನನ್ನು ನಿಯಂತ್ರಿಸಲು ಅವರಿಂದಲೇ ಸಾಧ್ಯಾವಗುತ್ತಿಲ್ಲ ಎಂದು ಡಿಕೆಶಿ ಕಿಡಿಕಾರಿದ್ದಾರೆ.

ನಮ್ಮ ಕಾರ್ಪೊರೇಟರ್ ಗಳಿಗೆ ನೊಟೀಸ್ ಕೊಟ್ಟು‌ ಬ್ಲಾಕ್ ಮೇಲ್ ಮಾಡ್ತಿದ್ದಾರೆ ಎಂದು ಗೃಹ ಸಚಿವ ಬೊಮ್ಮಾಯಿ ವಿರುದ್ಧ ಡಿಕೆಶಿ ಆರೋಪ ಮಾಡಿದ್ದಾರೆ.  ಏನು ನಡೀತಿದೆ ಇಲ್ಲಿ? ನಾವೇನು ಸುಮ್ನೆ ಕೂತಿದ್ದೀವಾ ? ಕಾವಲಭೈರಸಂದ್ರ , ಡಿಜೆ ಹಳ್ಳಿಯ ಗಲಭೆಗೆ ಕಾರಣ ಅವರ ಕಾರ್ಯಕರ್ತ ಟ್ವೀಟ್ ಮಾಡಿದ್ದೇ ಹೊರತು ಕಾಂಗ್ರೆಸ್ ಅಲ್ಲ. ಗಲಭೆ ನಿಯಂತ್ರಣ ಮಾಡುವಲ್ಲಿ ಗೃಹ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೂರು ಗಂಟೆ ಅವಧಿಯಲ್ಲಿ ಗಲಭೆ ನಿಯಂತ್ರಿಸಲಿಲ್ಲ. ಗಲಾಟೆ ಮಾಡಲು ಬಿಟ್ಬಿಟ್ಟು ಈಗ ಜಾತಿ ಬಣ್ಣ ಬಳೀತಿದಾರೆ ಎಂದು ಡಿಕೆಶಿ ಆರೋಪ ಮಾಡಿದ್ದಾರೆ. ಅಖಂಡ ಶ್ರೀನಿವಾಸ್ ನಮ್ಮ ಶಾಸಕ ಅವರ  ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ.  ಮನೆ ಮೇಲಿನ ದಾಳಿಯನ್ನ ನಾವು ಕಟುವಾಗಿ ಖಂಡಿಸಿದ್ದೇವೆ. ಗಲಭೆಕೋರರ ವಿರುದ್ಧ ಕಠಿಣ ಕ್ರಮ‌ ತಗೊಳ್ಳಿ ಇದಕ್ಕೆ ನಮ್ಮ ಬೆಂಬಲವೂ ಇದೆ . ಅದು ಬಿಟ್ಟು ಕಾಂಗ್ರೆಸ್ ನಲ್ಲಿ ಒಳ ಜಗಳ ಇದೆ ಅಂತ ಹೇಳಲು ಬೊಮ್ಮಾಯಿ ಯಾರು ಎಂದು ಡಿಕೆಶಿ ಪ್ರಶ್ನೆ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಎಐಸಿಸಿ‌ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಎಚ್.ಎಂ. ರೇವಣ್ಣ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತಿತರ ಮುಖಂಡರು ಹಾಜರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com