'ಬಿಜೆಪಿ ಕಚೇರಿಯಲ್ಲಿ ಕಸಗುಡಿಸಿ, 2023ರ ಚುನಾವಣೆಗೆ ಟಿಕೆಟ್ ನೀಡಬಹುದು': ರೋಷನ್ ಬೇಗ್ ವಿರುದ್ಧ ಜಮೀರ್ ವಾಗ್ದಾಳಿ

ಡಿಜೆ ಹಳ್ಳಿ ಗಲಭೆ ಪ್ರಕರಣ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರ ನಡುವಿನ ಮತ್ತೊಂದು ಸುತ್ತಿನ ಟ್ವೀಟ್ ವಾರ್ ಗೆ ಕಾರಣವಾಗಿದ್ದು, ಬಿಜೆಪಿ ಕಚೇರಿಯಲ್ಲಿ ಕಸಗುಡಿಸಿ, 2023ರ ಚುನಾವಣೆಗೆ ಟಿಕೆಟ್ ನೀಡಬಹುದು ಜಮೀರ್ ವಾಗ್ದಾಳಿ ನಡೆಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರ ನಡುವಿನ ಮತ್ತೊಂದು ಸುತ್ತಿನ ಟ್ವೀಟ್ ವಾರ್ ಗೆ ಕಾರಣವಾಗಿದ್ದು, ಬಿಜೆಪಿ ಕಚೇರಿಯಲ್ಲಿ ಕಸಗುಡಿಸಿ, 2023ರ ಚುನಾವಣೆಗೆ ಟಿಕೆಟ್ ನೀಡಬಹುದು ಜಮೀರ್ ವಾಗ್ದಾಳಿ ನಡೆಸಿದ್ದಾರೆ.

ಡಿಜೆ ಹಳ್ಳಿ ಗಲಭೆಗೆ ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಗಲಭೆಗೆ ಕಾರಣ ಎಂಬ ರೋಷನ್ ಬೇಗ್ ಆರೋಪಕ್ಕೆ ಜಮೀರ್ ಅಹಮ್ಮದ್ ಖಾನ್ ಕಿಡಿಕಾರಿದ್ದು, 'ರೋಷನ್‌ ಬೇಗ್ ಕಾಂಗ್ರೆಸ್ ಬಗ್ಗೆ ಸುಳ್ಳು ಆರೋಪ ಮಾಡಿ ಸಂಘಿ ನಿಷ್ಠೆ ಸಾಬೀತು ಮಾಡುವ ಬದಲು ಈಶ್ವರಪ್ಪನವರು ಹೇಳಿದಂತೆ ಬಿಜೆಪಿ ಕಚೇರಿ ಕಸ ಗುಡಿಸಿ, ನಿಮ್ಮ ಹಿರಿತನಕ್ಕೆ ಗೌರವ ಕೊಟ್ಟು 10 ವರ್ಷದ ಷರತ್ತು ಸಡಿಲಿಸಿ 2023ರ ಚುನಾವಣೆಯಲ್ಲಾದರೂ ಬಿಜೆಪಿ ಟಿಕೆಟ್ ನೀಡಬಹುದು. ಈ ದಿಸೆಯಲ್ಲಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ’ ಎಂದು ಹೇಳಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಜಮೀರ್, 'ಮೂರು ದಶಕಗಳಿಗಿಂತ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದು ಮುಸ್ಲಿಮರ ಬಡತನ, ಅನಕ್ಷರತೆ, ನಿರುದ್ಯೋಗದಂತಹ ಮೂಲಭೂತ ಸಮಸ್ಯೆಗಳ ಬಗ್ಗೆ ಎಂದೂ ತಲೆಕೆಡಿಸಿಕೊಳ್ಳದೆ, ಅಮಾಯಕ ಮುಸ್ಲಿಮರನ್ನು ರಾಜಕೀಯ ಸ್ವಾರ್ಥಕ್ಕಷ್ಟೇ ಬಳಸಿಕೊಂಡಿದ್ದ ರೋಷನ್ ಬೇಗ್  ಅವರು ಈಗ ಮುಸ್ಲಿಮರ ಪರ ಕಣ್ಣೀರು ಹಾಕುತ್ತಿರುವುದು ತಮಾಷೆಯಾಗಿದೆ. ಶಿವಾಜಿನಗರದಲ್ಲಿ ಬೇಗ್ ಅವರು ಸ್ಪರ್ಧಿಸುತ್ತಿದ್ದಾಗ ಎಂದೂ ಸ್ಪರ್ಧಿಸದಿದ್ದ ಎಸ್‌ಡಿಪಿಐ ಇತ್ತೀಚಿನ ಶಿವಾಜಿ ನಗರ ವಿಧಾನಸಭಾ ಉಪಚುನಾವಣೆಯಲ್ಲಿ ಕಣಕ್ಕಿಳಿದದ್ದು ಯಾಕೆ? ಕಾಂಗ್ರೆಸ್ ಬೆಂಬಲಿಸುವ ಮುಸ್ಲಿಮತಗಳನ್ನು ವಿಭಜಿಸುವ ದುರುದ್ದೇಶದಿಂದ ಎಸ್‌ಡಿಪಿಐ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು ಯಾರು ಎನ್ನುವುದನ್ನು ಬೇಗ್ ಸಾಹೇಬರು ತಿಳಿಸಬೇಕು' ಎಂದು ಹೇಳಿದ್ದಾರೆ.

ಅಂತೆಯೇ, 'ಡಿಜೆಹಳ್ಳಿ ಗಲಭೆ ಬಗ್ಗೆ ಇಲ್ಲಿಯ ವರೆಗೆ ಮೌನವಹಿಸಿದ್ದ ರೋಷನ್ ಬೇಗ್ ಅವರು ಇದ್ದಕ್ಕಿದ ಹಾಗೆ ಎಸ್‌ಡಿಪಿಐ ಯಿಂದ ಅಂತರ ಕಾಯ್ದುಕೊಳ್ಳಲು ಪ್ರಯತ್ನ ಪಡುತ್ತಿರುವುದು ಮತ್ತು ಕಾಂಗ್ರೆಸ್ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವುದನ್ನು ಕಂಡಾಗ ಪೊಲೀಸರ ತನಿಖೆಯ ಸುಳಿವು ಅವರಿಗೆ ಸಿಕ್ಕ ಹಾಗೆ ಕಾಣುತ್ತಿದೆ. ಪ್ರವಾದಿಯವರನ್ನು ಅವಹೇಳನ ಮಾಡಿರುವ ನವೀನ್ ಎಂಬ ಆರೋಪಿಯ ಕುಕೃತ್ಯವನ್ನು ಕನಿಷ್ಠ ಖಂಡಿಸುವ ಧೈರ್ಯ ತೋರದ ರೋಷನ್ ಬೇಗ್ ಅವರು ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಸಂಬಂಧದ ಕತೆ ಹೆಣೆಯುತ್ತಿರುವುದು ಅವರ ಆತ್ಮವಂಚಕ ನಡವಳಿಕೆಗೆ ಸರಿಯಾಗಿ ಹೊಂದಿಕೊಳ್ಳುತ್ತಿದೆ. ಮಾನ್ಯ ರೋಷನ್ ಬೇಗ್ ಅವರೇ, ಕಾಂಗ್ರೆಸ್ ಬಗ್ಗೆ ಸುಳ್ಳು ಆರೋಪ ಮಾಡಿ ಸಂಘಿ ನಿಷ್ಠೆ ಸಾಬೀತು ಮಾಡುವ ಬದಲು ಈಶ್ವರಪ್ಪನವರು ಹೇಳಿದಂತೆ ಬಿಜೆಪಿ ಕಚೇರಿ ಕಸ ಗುಡಿಸಿ, ನಿಮ್ಮ ಹಿರಿತನಕ್ಕೆ ಗೌರವ ಕೊಟ್ಟು 10 ವರ್ಷದ ಷರತ್ತು ಸಡಿಲಿಸಿ 2023ರ ಚುನಾವಣೆಯಲ್ಲಾದರೂ ಬಿಜೆಪಿ ಟಿಕೆಟ್ ನೀಡಬಹುದು. ಈ ದಿಸೆಯಲ್ಲಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಎಂದು ಕಿಡಿಕಾರಿದ್ದಾರೆ.

ಈ ಹಿಂದೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ರೋಷನ್ ಬೇಗ್ ಅವರು, 'ಅಲ್ಪಸಂಖ್ಯಾತ ಸಮುದಾಯದ ಬಡ ವರ್ಗಗಳನ್ನು ಎಸ್‌ಡಿಪಿಐ ಹಾಗೂ ಕಾಂಗ್ರೆಸ್‌ನಿಂದ ಶೋಷಿಸಬಾರದು. ಕಾಂಗ್ರೆಸ್ ಕಳೆದ 10 ವರ್ಷಗಳಿಂದ ಎಸ್‌ಡಿಪಿಐಗೆ ಬೆಂಬಲವಾಗಿ ಕೆಲಸ ಮಾಡುತ್ತಿದೆ. ಈಗ ಅವರಿಗೆ ತಮ್ಮ ಸ್ವಂತ ಶಾಸಕರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಈ ಘಟನೆಗೆ ಕಾಂಗ್ರೆಸ್ ಕಾರಣ, ಬೆಂಗಳೂರು ಗಲಭೆಗೆ ಕಾಂಗ್ರೆಸ್ ಹೊಣೆ ಹೊರಬೇಕು' ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com