ಸರ್ಕಾರದ ಬೊಕ್ಕಸ ತುಂಬಲು ಬಿಬಿಎಂಪಿ ಜಮೀನು ಮಾರಾಟ: ಕುಮಾರಸ್ವಾಮಿ

ಸರ್ಕಾರ  ಖಜಾನೆಯನ್ನು ಭರ್ತಿಮಾಡಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

Published: 18th August 2020 01:00 PM  |   Last Updated: 18th August 2020 01:00 PM   |  A+A-


Hd kumaraswamy

ಕುಮಾರಸ್ವಾಮಿ

Posted By : Shilpa D
Source : UNI

ಬೆಂಗಳೂರು: ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಸರ್ಕಾರದ ಖಜಾನೆಗೆ ಸುಮಾರು 5 ಸಾವಿರ ಕೋಟಿ.ರೂ.ಗಳ ಆದಾಯದ ನಿರೀಕ್ಷೆಯಿದೆ. ಹೀಗಾಗಿ ಖಾಲಿಯಾಗಿರುವ ಖಜಾನೆಯನ್ನು ಭರ್ತಿಮಾಡಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸುಮಾರು 5000 ಕೋಟಿ ರೂಪಾಯಿಗಳ ಆದಾಯ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರ ಇರುವುದನ್ನು ಕಳೆದು ಕೊಳ್ಳುವ ಈ ಪ್ರಸ್ತಾವನೆಯನ್ನು ಸಾರಾಸಗಟಾಗಿ ತಿರಸ್ಕರಿಸುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನನ್ನು ಮಾರಾಟ ಮಾಡಿದರೆ, ಮುಂದೆ ಸಾರ್ವಜನಿಕ ಅವಶ್ಯಕತೆಗಳಿಗೆ ಸರ್ಕಾರಿ ಜಮೀನು ಇಲ್ಲದಂತಾಗುತ್ತದೆ. ಅಗತ್ಯ ಬಿದ್ದಾಗ ಖಾಸಗಿಯವರ ಎದುರು ಅಂಗಲಾಚಬೇಕಾದ ದೈನಂದಿನ ಸ್ಥಿತಿ ನಿರ್ಮಾಣವಾಗಲಿದೆ. ಬೊಕ್ಕಸ
ತುಂಬಿಸಿಕೊಳ್ಳಲು ಬಿಡಿಎ ನಿವೇಶನಗಳನ್ನು ಹರಾಜು ಹಾಕುತ್ತಿರುವ ಸರ್ಕಾರ ಇದೀಗ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೀಡಿರುವ ಜಮೀನಿನ ಮೇಲೆ ಕಣ್ಣಿಟ್ಟಿದೆ. ಇಂತಹ ತಾತ್ಕಾಲಿಕ ಉಪಶಮನಗಳಿಂದ ಸರ್ಕಾರ ಶಾಶ್ವತವಾಗಿ ಬೊಕ್ಕಸ ತುಂಬಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. 

ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ. ಕವಡೆ ಕಾಸಿಗೆ ಸ್ಥಳೀಯ ಸಂಸ್ಥೆಗಳ ಜಮೀನನ್ನು ಗುತ್ತಿಗೆ ನೀಡಿರುವ ಸರ್ಕಾರ ಮಾರಾಟ ನಿರ್ಧಾರ ಕೈಬಿಟ್ಟು, ಬಾಡಿಗೆ ಹೆಚ್ಚಿಸಲು ಮುಂದಾಗಬೇಕೆಂದು ಕುಮಾರಸ್ವಾಮಿ ಹೇಳಿದ್ದಾರೆ.

Stay up to date on all the latest ರಾಜಕೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp