ಬೆಂಕಿ ಬಿದ್ದ ಮನೆಯಲ್ಲೂ ರಾಜಕಾರಣವೇ?  ಪ್ರಕರಣದ ರಾಜಕೀಯ ಲಾಭಕ್ಕೆ ಮುಂದಾದ ಕೈ-ಕಮಲಕ್ಕೆ ಎಚ್ ಡಿಕೆ ಪ್ರಶ್ನೆ

ಡಿ.ಜೆ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಜಕೀಯ ಧ್ರುವೀಕರಣಕ್ಕೆ ಪ್ರಯತ್ನಿಸುತ್ತಿವೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ದೂರಿದ್ದಾರೆ
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಜಕೀಯ ಧ್ರುವೀಕರಣಕ್ಕೆ ಪ್ರಯತ್ನಿಸುತ್ತಿವೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ದೂರಿದ್ದಾರೆ. 

ಈ ಗಲಭೆಯು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆ ಆಗಿದೆ. ಇದನ್ನು ಪರಾಮರ್ಶಿಸಿ, ದುಷ್ಟರನ್ನು  ಶಿಕ್ಷಿಸುವ ಕಾರ್ಯ ಆಗಬೇಕಿತ್ತು ಎಂದು ಅವರು ಬಹಿರಂಗ ಪತ್ರದಲ್ಲಿ ಹೇಳಿದ್ದಾರೆ. ಅಲ್ಲದೆ ಅವರು, ಎರಡೂ ಪಕ್ಷಗಳಿಗೆ ಪ್ರಶ್ನೆಗಳನ್ನು ಕೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಬಹಿರಂಗವಾಗಿ ಪತ್ರವೊಂದನ್ನು ಬರೆದಿದ್ದು ಸರ್ಕಾರ ಮತ್ತು ಅದರ ಚುಕ್ಕಾಣಿ ಹಿಡಿದಿರುವ ಪಕ್ಷ, ವಿಪಕ್ಷ ಜವಾಬ್ದಾರಿಯುತ ನಡವಳಿಕೆಯನ್ನು ಪ್ರದರ್ಶಿಸುವ ಬದಲಾಗಿ ಘಟನೆಯನ್ನೇ ನೆಪ ಮಾಡಿಕೊಂಡು ಕೆಸರೆರಚಾಟದಲ್ಲಿ ತೊಡಗಿವೆ ಎಂದು ಆಕ್ರೋಶ
ವ್ಯಕ್ತಪಡಿಸಿದ್ದಾರೆ.

ಡಿ.ಜೆ ಹಳ್ಳಿ ಗಲಭೆಯು ರಾಜ್ಯದ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ಸಮಸ್ಯೆ. ಈ ಘಟನೆಯನ್ನು ಪರಾಮರ್ಶಿಸಿ, ದುಷ್ಟರನ್ನು ಶಿಕ್ಷಿಸುವ ಕಾರ್ಯವಾಗಬೇಕಾಗಿತ್ತು. ಈ ಘಟನೆಯ ಅಧ್ಯಯನದ ಮೂಲಕ ಮುಂದಿನ ದಿನಗಳಲ್ಲಿ ಗಲಭೆಗಳು ಸಂಭವಿಸದಂತೆ ಎಚ್ಚರಿಕೆ, ಜವಾಬ್ದಾರಿಯುತ ನಡವಳಿಕೆಯನ್ನು ಸರ್ಕಾರ ಮತ್ತು ಅದರ ಚುಕ್ಕಾಣಿ ಹಿಡಿದಿರುವ ಪಕ್ಷ, ವಿಪಕ್ಷ
ಪ್ರದರ್ಶಿಸಬೇಕಾಗಿತ್ತು.

ಆದರೆ, ಈ ಘಟನೆಯನ್ನೇ ನೆಪ ಮಾಡಿಕೊಂಡು ರಾಷ್ಟ್ರೀಯ ಪಕ್ಷಗಳೆರಡು ಕೆಸರೆರಚಾಟದಲ್ಲಿ ತೊಡಗಿವೆ. ಈ ಮೂಲಕ ಜನರ ಮನಸ್ಸಿನಲ್ಲಿರಬಹುದಾದ ತಮ್ಮ ವಿಶ್ವಾಸಾರ್ಹತೆ, ಉತ್ತರದಾಯಿತ್ವವನ್ನು ಬಿಜೆಪಿ ಕಾಂಗ್ರೆಸ್‌ ಪಕ್ಷಗಳೆರಡೂ ಕಳೆದುಕೊಂಡೆ ಎಂದು ಕಿಡಿಕಾರಿದ್ದಾರೆ. ಅಲ್ಲದೆ ಎರಡು ಪಕ್ಷಗಳ ಮುಖಂಡರಿಗೆ ಕೆಲವೊಂದು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ಅವರು ಹೀಗಿವೆ.

ಡಿಜೆ ಹಳ್ಳಿ ಗಲಭೆ ಪ್ರಕರಣ ಮತ್ತು ಪಾದರಾಯನಪುರ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್‌ ಅಲ್ಪಸಂಖ್ಯಾತರ ರಕ್ಷಕನಂತೆ ತನ್ನನ್ನು ತಾನು ಬಿಂಬಿಸಿಕೊಳ್ಳುತ್ತಿದೆ. ಅನ್ಯ ಕೋಮಿನ ಜನರ ಅಪರಾಧ ಪ್ರಕರಣಗಳ ಸಂದರ್ಭದಲ್ಲಿ ಎದ್ದು ನಿಲ್ಲುವ ಕಾಂಗ್ರೆಸ್‌, ಪೌರತ್ವ ತಿದ್ದುಪಡಿ ಕಾಯ್ದೆಯಂಥ ದುರಿತ ಕಾಲದಲ್ಲಿ ಅಲ್ಪಸಂಖ್ಯಾತರ ರಕ್ಷಣೆಗೆ ಏಕೆ ನಿಲ್ಲಲಿಲ್ಲ?  ಕ್ರೈಂ ಸಂಭವಿಸಿದಾಗ ಮಾತ್ರವೇ ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ರಕ್ಷಣೆ ಕಾಣಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.
 

ಡಿಜೆ ಹಳ್ಳಿ ಪ್ರಕರಣ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಗೃಹ ಇಲಾಖೆ, ಗುಪ್ತಚರ ಇಲಾಖೆ ಮತ್ತು ಸರ್ಕಾರದ ಅತಿ ದೊಡ್ಡ ವೈಫಲ್ಯ. ಇದರ ಹೊಣೆ ಹೊರಬೇಕಾದ ಬಿಜೆಪಿ ಸರ್ಕಾರ ಅಕ್ಷರಶಃ ಹೊಣೆಗೇಡಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಗೃಹ ಇಲಾಖೆಯ ಯಾವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ? ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಇದರಲ್ಲಿ ರಾಜಕೀಯ ಧ್ರುವೀಕರಣದ ಸಂಚು ನಡೆಸುತ್ತಿದೆ. ನಾಚಿಕೆಯಾಗದೇ ಬಿಜೆಪಿಗೆ ಎಂದು ಕಿಡಿ ಕಾರಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com