ಗಾಂಧಿ ಕುಟುಂಬದ ನೇತೃತ್ವದಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷ ಮುನ್ನಡೆಸಬೇಕು: ಸಿದ್ದರಾಮಯ್ಯ

ಕಾಂಗ್ರೆಸ್ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು, ಕೆಲವು ಸಲಹೆಗಳನ್ನುನೀಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ
ಅವರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು, ಕೆಲವು ಸಲಹೆಗಳನ್ನು
ನೀಡಿದ್ದಾರೆ.

ಗಾಂಧಿ ಕುಟುಂಬದ ನೇತೃತ್ವದಲ್ಲಿ ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಮುನ್ನಡಸಬೇಕು ಎಂದು ಅಭಿಪ್ರಾ.
ಪಟ್ಟಿರುವ ಮಾಜಿ ಸಿಎಂ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ತೊಂದರೆಗಳನ್ನು
ಎದುರಿಸುತ್ತಿರುವುದು ಇದೇ ಮೊದಲೇನಲ್ಲ. ಪ್ರತಿ ಬಾರಿಯೂ ಪಕ್ಷ ದೇಶವೇ ಹಿಂತಿರುಗಿ
ನೋಡುವಂತೆ ಮಾಡಿದೆ. ಪಕ್ಷ ಸಂಕಷ್ಟಕ್ಕೀಡಾದಾಗಲೆಲ್ಲ ಗಾಂಧಿ ಮತ್ತು ನೆಹರು ಕುಟುಂಬ ಒಟ್ಟಾಗಿ
ಪಕ್ಷವನ್ನು ಮುನ್ನೆಸಿರುವುದು ಎಂದಿಗೂ ಸ್ಮರಣೀಯ ಎಂದಿದ್ದಾರೆ.

ಮಾಜಿ ಪ್ರಧಾನಿ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರು ರಾಜಕೀಯದಲ್ಲಿ ಪುನರುಜ್ಜೀವನ
ಕಂಡಿದ್ದು ಹಾಗೂ ಪಕ್ಷಕ್ಕೆ ಬಲ ನೀಡಿದ್ದನ್ನು ಸ್ಮರಿಸಿದ ಸಿದ್ದರಾಮಯ್ಯ ಅವರು, 1977 ರಲ್ಲಿ
ಪರಾಜಯಗೊಂಡಿದ್ದರೂ ಸಹ ಸೋಲನ್ನು ಸವಾಲಾಗಿ ಸ್ವೀಕರಿಸಿ ಪಕ್ಷವನ್ನು ಮುನ್ನಡೆಸಿದ್ದರು. 

ಇಂದಿರಾ ಗಾಂಧಿ ಅವರ ಮರಣ ನಂತರ ರಾಜೀವ್ ಗಾಂಧಿ ಪಕ್ಷದ ನಾಯಕತ್ವವನ್ನು
ವಹಿಸಿಕೊಂಡು ಪಕ್ಷಕ್ಕೆ ಮತ್ತೆ ಪುನರ್ ಜನ್ಮ  ನೀಡಿದರು. ದೂರದಷ್ಟಿಯ ರಾಜೀವ್ ಗಾಂಧಿ ಅವರು
ಮೃತಪಟ್ಟಾಗ ಸೋನಿಯಾ ಗಾಂಧಿ ಅವರು ಅಂಜದೇ ಎರಡೂ ಮಕ್ಕಳನ್ನು ಬೆಳೆಸುವ ಜವಾಬ್ದಾರಿಯ ಜೊತೆಗೆ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿಯನ್ನು ತೆಗೆದುಗಕೊಂಡಿದ್ದರು. ಈ ವೇಳೆ ಸೋನಿಯಾ ಗಾಂಧಿ ಅವರು ಸಾಕಷ್ಟು ಅಡೆತಡೆಗಳನ್ನು ಎದುರಿಸಿ ಎಲ್ಲದರ ನಡುವೆಯೂ ಪಕ್ಷಕ್ಕೆ ಬಲವಾಗಿ ನಿಂತರು ಎಂದು ಪತ್ರದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ಅವರು ಸೋನಿಯಾ ಅವರ ಸೇವೆಯನ್ನು ಸ್ಮರಿಸಿದ್ದಾರೆ.

ಇದಕ್ಕು ಮುನ್ನ ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿದೆ.  ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು‌ ನಾವೆಲ್ಲರೂ ಪ್ರಯತ್ನಿಸಬೇಕು. ಹೊರತು ದುರ್ಬಲಗೊಳಿಸುವುದಲ್ಲ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com