ಎಐಸಿಸಿ ಅಧ್ಯಕ್ಷ ಸ್ಥಾನ ರೇಸ್ ನಲ್ಲಿ ನಾನಿಲ್ಲ: ಮಲ್ಲಿಕಾರ್ಜುನ ಖರ್ಗೆ

ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ರೇಸ್ ನಲ್ಲಿ ನಾನಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ.
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ರೇಸ್ ನಲ್ಲಿ ನಾನಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ.

ಸೋಮವಾರ ಸುಮಾರು 7 ಗಂಟೆಗಳ ಕಾಲ ನಡೆದ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿಯವರೇ ಮುಂದುವರೆಯಬೇಕೆಂದು ನಾನು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾನು ನನ್ನ ವೈಯಕ್ತಿಕ ಅಭಿಪ್ರಾಯವನ್ನು ಸಭೆಯಲ್ಲಿ ತಿಳಿಸಿದ್ದೇನೆ. ಅಲ್ಲದೆ, ಎಐಸಿಸಿ ಅಧ್ಯಕ್ಷೆಯಾಗಿ ಪಕ್ಷವನ್ನು ಮುನ್ನಡೆಸುವಂತೆ ಸಿಡಬ್ಲ್ಯೂಸಿ ಸದಸ್ಯರೆಲ್ಲರೂ ಒಕ್ಕೊರಲಿನಿಂದ ಮನವಿ ಮಾಡಿದ್ದೇವೆಂದು ಎಂದು ಹೇಳಿದ್ದಾರೆ. 

ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ರೇಸ್ ನಲ್ಲಿ ನಾನಿದ್ದೇನೆಂಬುದು ಕೇವಲ ವದಂತಿಯಷ್ಟೇ. ಸೋನಿಯಾ ನೇತೃತ್ವದಲ್ಲಿ ಕಾಂಗ್ರೆಸ್ 10 ವರ್ಷ ಅಧಿಕಾರದಲ್ಲಿತ್ತು. ಆದರೆ, ಕಾರಣಾಂತರಗಳಿಂದ ನಾವು ಅಧಿಕಾರಿ ಕಳೆದುಕೊಂಡಿದ್ದೇವೆ. ಅಧಿಕಾರದಲ್ಲಿರುವ ಬಿಜೆಪಿ ಜಾತ್ಯಾತೀತ ತತ್ವಕ್ಕೆ ವಿರುದ್ದವಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಜವಾಬ್ದಾರಿಯಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com