ಟಿಪ್ಪು ಸುಲ್ತಾನ್‌ ಈ ನೆಲದ ಮಗ, ವೀರ ಹೋರಾಟಗಾರ: ಎಚ್.ವಿಶ್ವನಾಥ್

ಟಿಪ್ಪು ಸುಲ್ತಾನ್‌ ಈ ನೆಲದ ಮಗ, ವೀರ ಹೋರಾಟಗಾರ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಅವರು ಹೇಳಿದ್ದಾರೆ.
ಎಚ್.ವಿಶ್ವನಾಥ್
ಎಚ್.ವಿಶ್ವನಾಥ್

ಬೆಂಗಳೂರು: ಟಿಪ್ಪು ಸುಲ್ತಾನ್‌ ಈ ನೆಲದ ಮಗ, ವೀರ ಹೋರಾಟಗಾರ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎಚ್‌. ವಿಶ್ವನಾಥ್‌ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಟಿಪ್ಪು ಯಾವುದೇ ಜಾತಿ ಅಥವಾ ಧರ್ಮಕ್ಕೆ ಸೇರಿದ ವ್ಯಕ್ತಿಯಲ್ಲ. ಆತನ ಕುರಿತು ವಿದ್ಯಾರ್ಥಿಗಳು ಓದಿ ತಿಳಿದುಕೊಳ್ಳಬೇಕು. ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿದ ಕಮಾಂಡರ್‌. ಅದೇ ಸಾಲಿಗೆ ಟಿಪ್ಪು ಕೂಡ ಸೇರುತ್ತಾನೆ ಎಂದು ಅವರು ಹೇಳಿದರು.

ಗಾಂಧೀಜಿಯಿಂದ ಟಿಪ್ಪು ಸುಲ್ತಾನ್‌ ವರೆಗೆ ನಮ್ಮ ವಿದ್ಯಾರ್ಥಿಗಳು ಓದಬೇಕು. ಸರಕಾರ ಟಿಪ್ಪು ಪಠ್ಯವನ್ನು ಕೈಬಿಟ್ಟಿಲ್ಲ. 5ನೇ ತರಗತಿ ಬದಲಿಗೆ 7ನೇ ತರಗತಿಯಲ್ಲಿ ಸೇರಿಸಿದೆ ಎಂದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಆಗಲೇ ಬೇಕು. ರಾಯಣ್ಣ ಸ್ವಾತಂತ್ರ್ಯಕ್ಕಾಗಿ ಹೋರಾ ಡಿದ ಅಪ್ರತಿಮ ವೀರ. ಅವರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಸಿಕ್ಕಿದೆ. ಅವರ ಪ್ರತಿಮೆ ಸ್ಥಾಪಿಸುವುದು ಸರಕಾರದ ಕರ್ತವ್ಯ ಎಂದರು.

ನನ್ನನ್ನು  ಮಾಡಿ ಎಂದು ಕೇಳ್ಳೋದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರಕಾರ ಬದಲು ನಾನು ಕಾರಣನಾಗಿದ್ದು, ಅದನ್ನು ತಿಳಿದು ಪಕ್ಷದ ನಾಯಕರೇ ನನ್ನನ್ನು ಮಂತ್ರಿ ಮಾಡಬೇಕು ಎಂದರು. ಮಂತ್ರಿಯಾದರೆ ಏನೋ ಮಾಡಿ ಬಿಡುತ್ತೇನೆ ಎಂದಲ್ಲ. ನಾನು 1978 ರಿಂದಲೇ ರಾಜಕೀಯ ದಲ್ಲಿರುವವ. ಮಲ್ಲಿಕಾರ್ಜುನ ಖರ್ಗೆ ಅವರು 72ರಿಂದಲೇ ರಾಜಕೀಯದಲ್ಲಿದ್ದಾರೆ. ನಮ್ಮಂಥವರ ಅನುಭವ ಪಡೆಯಿರಿ ಎಂದು ಹೇಳುತ್ತಿದ್ದೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com