ಪ್ರಣಬ್ ಮುಖರ್ಜಿ ನಿಧನಕ್ಕೆ ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರ ಸಂತಾಪ

ರಾಷ್ಟ್ರಪತಿಗಳಾಗಿ ಪ್ರಣಬ್ ಮುಖರ್ಜಿ ಅವರು ದೇಶದ ಗರಿಮೆಯನ್ನು ಮತ್ತಷ್ಟು  ಎತ್ತರಕ್ಕೆ ಕೊಂಡೊಯ್ದ ಮಹಾನ್ ಚೇತನ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.
ಪ್ರಣಬ್ ಮುಖರ್ಜಿ
ಪ್ರಣಬ್ ಮುಖರ್ಜಿ

ಬೆಂಗಳೂರು: ರಾಷ್ಟ್ರಪತಿಗಳಾಗಿ ಪ್ರಣಬ್ ಮುಖರ್ಜಿ ಅವರು ದೇಶದ ಗರಿಮೆಯನ್ನು ಮತ್ತಷ್ಟು  ಎತ್ತರಕ್ಕೆ ಕೊಂಡೊಯ್ದ ಮಹಾನ್ ಚೇತನ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.

ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಸಿಎಂ, ಐದು ದಶಕಗಳ ಸುದೀರ್ಘ ರಾಜಕೀಯ ಜೀವನದಲ್ಲಿ ಅವರು ರಕ್ಷಣಾ, ಆರ್ಥಿಕ, ವಿದೇಶಾಂಗ ವ್ಯವಹಾರಗಳ  ಸಚಿವರಾಗಿ ಹಾಗೂ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದರು. ದೂರದೃಷ್ಟಿಯುಳ್ಳವರಾಗಿದ್ದ ಅವರು ಭಾರತ ಕಂಡ ಅತ್ಯುತ್ತಮ ಸಂಸದ ಹಾಗೂ  ಸಮರ್ಥ ರಾಜಕಾರಣಿಯಾಗಿದ್ದರು. ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರಣಬ್ ಮುಖರ್ಜಿ ನಿಧನಕ್ಕೆ ಡಿ.ಕೆ ಶಿವಕುಮಾರ್ ಸಂತಾಪ
ಮಾಜಿ ರಾಷ್ಟ್ರಪತಿ, ಭಾರತ ರತ್ನ, ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

'ಪ್ರಣಬ್ ಮುಖರ್ಜಿ ಅವರು ಭಾರತ ಕಂಡ ಶ್ರೇಷ್ಠ ರಾಜಕಾರಣಿಗಳಲ್ಲಿ ಒಬ್ಬರು. ಅತ್ಯುತ್ತಮ ವ್ಯಕ್ತಿತ್ವ ಹೊಂದಿದ್ದ ಅವರು, ಸುಮಾರು 5 ದಶಕಗಳ ಕಾಲ ರಾಜಕೀಯದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ ಮಹಾನ್ ನಾಯಕ ಎಂದು ಬಣ್ಣಿಸಿದ್ದಾರೆ.

ಇನ್ನು ಪ್ರತಿಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಹ ಮಾಜಿ ರಾಷ್ಟ್ರಪತಿ, ಹಿರಿಯ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾಜಿ ರಾಷ್ಟ್ರಪತಿಗಳು, ಕೇಂದ್ರದ ಮಾಜಿ ಸಚಿವರು ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಖಾತೆಗಳ ಸಚಿವರಾಗಿ ಅವರು ಮಾಡಿರುವ ಸಾಧನೆಗೆ ದೇಶ ಸದಾ ಋಣಿಯಾಗಿದೆ. ಅವರ ಕುಟುಂಬ ಮತ್ತು ಬಂಧು ಮಿತ್ರರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಅವರು ಸಹ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com