ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಿಲ್ಲ: ಯಡಿಯೂರಪ್ಪ ಬೆಂಬಲಕ್ಕೆ ನಿಂತ ಬಿಜೆಪಿ ಹಿರಿಯ ನಾಯಕರು

ಮುಖ್ಯಮಂತ್ರಿ ಸ್ಥಾನದಿಂದ ಸಿಎಂ ಯಡಿಯೂರಪ್ಪ ಕೆಳಗಿಳಿಯುತ್ತಾರೆ ಎಂದು ಹಬ್ಬುತ್ತಿರುವ ಸುದ್ದಿಯನ್ನು ನಿರಾಕರಿಸಿರುವ ರಾಜ್ಯ ಬಿಜೆಪಿ ಹಿರಿಯ ನಾಯಕರು ಸಿಎಂ ಬೆಂಬಲಕ್ಕೆ ನಿಂತಿದ್ದಾರೆ.

Published: 01st December 2020 07:29 AM  |   Last Updated: 01st December 2020 04:57 PM   |  A+A-


Senior BJP netas back CM Yediyurappa,

ಯಡಿಯೂರಪ್ಪ ಬೆಂಬಲಕ್ಕೆ ಹಿರಿಯ ನಾಯಕರು

Posted By : Shilpa D
Source : The New Indian Express

ಮೈಸೂರು: ಮುಖ್ಯಮಂತ್ರಿ ಸ್ಥಾನದಿಂದ ಸಿಎಂ ಯಡಿಯೂರಪ್ಪ ಕೆಳಗಿಳಿಯುತ್ತಾರೆ ಎಂದು ಹಬ್ಬುತ್ತಿರುವ ಸುದ್ದಿಯನ್ನು ನಿರಾಕರಿಸಿರುವ ರಾಜ್ಯ ಬಿಜೆಪಿ ಹಿರಿಯ ನಾಯಕರು ಸಿಎಂ ಬೆಂಬಲಕ್ಕೆ ನಿಂತಿದ್ದಾರೆ.

ಬಿಎಸ್ ಯಡಿಯೂರಪ್ಪ ಯಾವುದೇ ತಪ್ಪು ಮಾಡಿಲ್ಲ, ಹೀಗಿರುವಾಗ ನಾಯಕತ್ವದ ಬದಲಾವಣೆ ಪ್ರಶ್ನೆ ಏಕೆ ಬರುತ್ತದೆ ಎಂದು ಕಂದಾ ಸಚಿವ ಆರ್.ಅಶೋಕ, ಸಹಕಾರ ಸಚಿವ ಸೋಮಶೇಖರ್, ಮತ್ತು ಬಿವೈ ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಯಾವುದೇ ವಿಷಯ ಕೇಂದ್ರ ನಾಯಕರ ಮುಂದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಎಂಟಿಬಿ ನಾಗರಾಜ್, ಆರ್.ಶಂಕರ್ ಮತ್ತಿತರರು ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ತ್ಯಾಗ ಮಾಡಿದ್ದಾರೆ, ಅವರನ್ನು ಸಚಿವರನ್ನಾಗಿಸುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ನಿರ್ಧರಿಸುತ್ತಾರೆ, ನಾವು ಕೂಡ ಕೇಂದ್ರ ನಾಯಕರ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರೇ ಮುಂದುವರಿಯಲಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆಂದು ವಿಜಯೇಂದ್ರ ತಿಳಿಸಿದರು, ಬಿಜೆಪಿಯಲ್ಲಿ ಬಾಂಬೆ ಟೀಮ್, ಬೆಂಗಳೂರು ಟೀಮ್ ಎಂಬ ಗುಂಪುಗಳಿಲ್ಲ, ನಾವೆಲ್ಲರೂ ಒಂದೇ ಎಂದು ಸೋಮಶೇಖರ್ ತಿಳಿಸಿದರು.

Stay up to date on all the latest ರಾಜಕೀಯ news
Poll
Yeddyurappa

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ಕರ್ನಾಟಕ ಬಜೆಟ್ 2021 ಕುರಿತು ನಿಮ್ಮ ಅಭಿಪ್ರಾಯ...


Result
ಸಮತೋಲಿತ ಬಜೆಟ್
ಗೊತ್ತುಗುರಿ ಇಲ್ಲದ ಬಜೆಟ್
flipboard facebook twitter whatsapp