ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಕೆಳಗಿಳಿಸಲು ಜೆಡಿಎಸ್ ಜೊತೆ ಸೇರಿ ಬಿಜೆಪಿ ತಂತ್ರ!

ಡಿಸೆಂಬರ್ 7ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಪರಿಷತ್ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬೇಕೆಂದು ಬಿಜೆಪಿ ತನ್ನ ಪಕ್ಷದ ಸದಸ್ಯರಿಗೆ ಈಗಾಗಲೇ ನೋಟಿಸ್ ನೀಡಿದೆ.
ವಿಧಾನ ಪರಿಷತ್
ವಿಧಾನ ಪರಿಷತ್

ಬೆಂಗಳೂರು: ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ನಾಲ್ಕು ಸ್ಥಾನಗಳನ್ನು ಗೆದ್ದ ನಂತರ ವಿಧಾನ ಪರಿಷತ್ತಿನಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಆಡಳಿತಾರೂಡ ಬಿಜೆಪಿ ಕಾಂಗ್ರೆಸ್ ನ ಪ್ರತಾಪ್ ಚಂದ್ರಶೆಟ್ಟಿಯನ್ನು ಪರಿಷತ್ ಅಧ್ಯಕ್ಷರ ಹುದ್ದೆಯಿಂದ ಕೆಳಗಿಳಿಸಲು ಜೆಡಿಎಸ್ ನೆರವು ಕೋರಲು ಚಿಂತಿಸಿದೆ.

ಡಿಸೆಂಬರ್ 7ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಪರಿಷತ್ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬೇಕೆಂದು ಬಿಜೆಪಿ ತನ್ನ ಪಕ್ಷದ ಸದಸ್ಯರಿಗೆ ಈಗಾಗಲೇ ನೋಟಿಸ್ ನೀಡಿದೆ.

ಜೆಡಿಎಸ್ ನೆರವಿನೊಂದಿಗೆ ಪರಿಷತ್ ಸಭಾಪತಿ ಅಧ್ಯಕ್ಷ ಸ್ಥಾನ ಪಡೆಯಲು ಹವಣಿಸುತ್ತಿದೆ. ನಾವು ಎಲ್ಲರಿಂದಲೂ ಬೆಂಬಲ ಕೋರಿದ್ದೇವೆ ಎಂದು ಬಿಜೆಪಿ ವಕ್ತಾರ ರವಿಕುಮಾರ್ ಹೇಳಿದ್ದಾರೆ.

75 ಸದಸ್ಯರಿರುವ ಪರಿಷತ್ ನಲ್ಲಿ 31, ಬಿಜೆಪಿ ಸದಸ್ಯರು, ಕಾಂಗ್ರೆಸ್ 28 ಹಾಗೂ ಜೆಡಿಎಸ್ ನ 14 ಸದಸ್ಯರಿದ್ದಾರೆ. ಶೆಟ್ಟಿ ಅವರನ್ನು ಹೊರಹಾಕಲು ಜೆಡಿಎಸ್ ಬೆಂಬಲ ಬಿಜೆಪಿಗೆ ಅಗತ್ಯವಾಗಿದೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ನ ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಸಭಾಪತಿಯನ್ನಾಗಿ ನೇಮಿಸಲಾಗಿತ್ತು. ಪರಿಷತನಲ್ಲಿ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ಸೂಚಿಸುವುದಾಗಿ ಮಾಜಿ ಸಚಿವ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

ಆದರೆ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಸೇರಿದಂತೆ ಇತರ ವಿಷಯಗಳ ಬಗ್ಗೆ ಪಕ್ಷವು ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಮತ್ತು ಕೈಗಾರಿಕಾ ವಿವಾದಗಳ ಮಸೂದೆಗೆ ತಿದ್ದುಪಡಿ ಮಸೂದೆ ಅಸೆಂಬ್ಲಿಯಲ್ಲಿ ಅಂಗೀಕರಿಸಲ್ಪಟ್ಟ ನಂತರ ಮೇಲ್ಮನೆಯಲ್ಲಿ ಪಾಸು ಮಾಡಲು  ವಿಫಲವಾಯಿತು, ಈಗ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಬಿಜೆಪಿ ಸದಸ್ಯರ ಸಂಖ್ಯೆ ಹೆಚ್ಚಿದೆ.

ಮಾನ್ಸೂನ್ ಅಧಿವೇಶನದ ಕೊನೆಯ ದಿನ, ವಿಷಯಗಳು ಚರ್ಚೆಯಾಗುತ್ತಿರುವಾಗ ಕೌನ್ಸಿಲ್ ಅನ್ನು ದಿಢೀರ್ ಮುಂದೂಡಲಾಯಿತು ಎಂದು ಬಿಜೆಪಿ ಎಂಎಲ್ಸಿ ಅರುಣ್ ಶಹಾಪುರ ತಿಳಿಸಿದ್ದಾರೆ.

ಡಿಸೆಂಬರ್ 8 ರಂದು ಅವಿಶ್ವಾಸ ನಿರ್ಣಯ ಗೊತ್ತುವಳಿ ಮಂಡನೆ ಮಾಡುವ ಸಾಧ್ಯತೆಯಿದೆ. ಅಧಿವೇಶನದಲ್ಲಿ ಉಪಾಧ್ಯಕ್ಷ ಎಸ್ ಎಲ್ ಧರ್ಮೆ ಗೌಡ ಅವರನ್ನು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಬಿಜೆಪಿ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ. ಜೆಡಿಎಸ್ ಮತ್ತು ಬಿಜೆಪಿಯ ಹಿರಿಯ ನಾಯಕರು ಚರ್ಚೆ ನಡೆಸಿದ ನಂತರ ಹೊಸ ಅಧ್ಯಕ್ಷರ ಚುನಾವಣೆಯನ್ನು ನಿರ್ಧರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com