ಯಡಿಯೂರಪ್ಪ ಜೊತೆ ಕುಮಾರಸ್ವಾಮಿ ಸಖ್ಯ: ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ? ವಿಶ್ವನಾಥ್ ಕಿಡಿ

ಇತ್ತೀಚೆಗೆ ಸಿಎಂ ಯಡಿಯೂರಪ್ಪ ಮತ್ತು ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಪದೇ ಪದೇ ಭೇಟಿಯಾಗಿ ಹತ್ತಿರವಾಗುತ್ತಿರುವುದಕ್ಕೆ ಮಾಜಿ ಸಚಿವ ಎಚ್. ವಿಶ್ವನಾಥ್ ಕಿಡಿ ಕಾರಿದ್ದಾರೆ.
ಎಚ್.ವಿಶ್ವನಾಥ್
ಎಚ್.ವಿಶ್ವನಾಥ್

ಮೈಸೂರು: ಇತ್ತೀಚೆಗೆ ಸಿಎಂ ಯಡಿಯೂರಪ್ಪ ಮತ್ತು ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಪದೇ ಪದೇ ಭೇಟಿಯಾಗಿ ಹತ್ತಿರವಾಗುತ್ತಿರುವುದಕ್ಕೆ ಮಾಜಿ ಸಚಿವ ಎಚ್. ವಿಶ್ವನಾಥ್ ಕಿಡಿ ಕಾರಿದ್ದಾರೆ.

ನಾವು ಯಾರನ್ನು ವಿರೋಧಿಸಿದ್ದೆವೋ ಅವರೇ ಈಗ ಯಡಿಯೂರಪ್ಪ ಅವರ ಸ್ನೇಹಿತರಾಗಿದ್ದಾರೆ. ತಂದೆಯನ್ನು ಕೊಂದವನನ್ನೇ, ತಾಯಿಯು ಮದುವೆ ಆಗಿ ಮೆರವಣಿಗೆ ಹೊರಟಂತಿದೆ. ಷೇಕ್ಸ್‌ಪಿಯರ್‌ನ ‘ಹ್ಯಾಮ್ಲೆಟ್‌’ ನಾಟಕದಲ್ಲಿ ಇದೇ ರೀತಿ ಪ್ರಸಂಗ ಇದೆ. ನಮ್ಮ ಹಾಗೂ ಸರ್ಕಾರದ ಪರಿಸ್ಥಿತಿಯೂ ಹಾಗೇ ಆಗಿದೆ ಎಚ್‌.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂಬ ರೀತಿ ಸಿಎಂ ಯಡಿಯೂರಪ್ಪ ವರ್ತಿಸುತ್ತಿದ್ದಾರೆ, ನಾವು ಯಾರನ್ನು ವಿರೋಧಿಸಿ ಬಂದಿದ್ದೆವೋ ಅವರ ಜೊತೆ ನಂಟು ಬೆಳೆಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

‘ಕೇಂದ್ರದ ವರಿಷ್ಠರು ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಒಪ್ಪಿಗೆಯನ್ನೇ ನೀಡಿಲ್ಲ. ಯೋಗೇಶ್ವರ್ ಅವರಿಗೆ ಮಂತ್ರಿ ಸ್ಥಾನ ನೀಡಲು ಇಷ್ಟೊಂದು ಅವಸರ ಏಕೆ? ಬಿಜೆಪಿ ಸರ್ಕಾರ ರಚನೆಯಲ್ಲಿ ಯೋಗೇಶ್ವರ್‌ ಪಾತ್ರವೇನಿತ್ತು? ಅವರೇನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರೇ? ಎಂದು ಪ್ರಶ್ನಿಸಿರುವ ವಿಶ್ವನಾಥ್ ಅವರ ಬದಲಿಗೆ ಪಕ್ಷದ ಹಿರಿಯ ನಾಯಕರಾದ ಉಮೇಶ್ ಕತ್ತಿ, ಬಸವನಗೌಡ ಪಾಟೀಲ್ ಅವರನ್ನು ಮಂತ್ರಿ ಮಾಡಲಿ ಎಂದು ಆಗ್ರಹಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com