ಉಪಚುನಾವಣೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದೆ: ಸಿದ್ದರಾಮಯ್ಯ

ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆ ಸೋಲಿನಿಂದ ನಾವು ಹತಾಶರಾಗಿಲ್ಲ, ಮುಂಬರುವ ಲೋಕಸಭೆ ಮತ್ತು ವಿಧಾನ ಸಭೆ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು:  ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆ ಸೋಲಿನಿಂದ ನಾವು ಹತಾಶರಾಗಿಲ್ಲ, ಮುಂಬರುವ ಲೋಕಸಭೆ ಮತ್ತು ವಿಧಾನ ಸಭೆ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಎಲ್ಲಾ ನಾಯಕರು ಉಪ ಚುನಾವಣೆ ಜವಾಬ್ದಾರಿ ಹಂಚಿಕೊಂಡಿದ್ದು ಚುನಾವಣೆ ಎದುರಿಸುವುದಾಗಿ ತಿಳಿಸಿದ್ದಾರೆ. 

ಉಪ ಚುನಾವಣೆಯನ್ನು ಪಕ್ಷ ಗಂಭೀರವಾಗಿ ಸ್ವೀಕರಿಸಿದೆ, ಹೀಗಾಗಿಯೇ 2013 ಮತ್ತು 2018 ರ ವಿಧಾನಸಭೆ ಚುನಾವಣೆ ಫಲಿತಾಂಶಕ್ಕಿಂತ ಶೆ.2ರಷ್ಟು ಮತಗಳು ಹೆಚ್ಚಿದೆ ಎಂದು ಹೇಳಿದ್ದಾರೆ.

ಆದರೆ ಅಧಿಕಾರ ಮತ್ತು ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಬಿಜೆಪಿ ಜೆಡಿಎಸ್ ಜೊತೆಗೂಡಿ ಕಾಂಗ್ರೆಸ್ ಸೋಲಿಸಿತು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜಕಾರಣದ ಕೇಸರೀಕರಣದ ಬಗ್ಗೆ ಬುದ್ಧಿಜೀವಿಗಳು ಮತ್ತು ಸಮಾನ ಮನಸ್ಕ ಜನರು ಆತಂಕ ವ್ಯಕ್ತಪಡಿಸಿದ್ದಾರೆ, ಅದರಲ್ಲೂ ವಿಶೇಷವಾಗಿ ‘ಲವ್ ಜಿಹಾದ್’ ಗಾಗಿ ಶಾಸನಗಳನ್ನು ಜಾರಿಗೊಳಿಸಿದ್ದು ಪರಿಶೀಲನೆ ಮಾಡಿಲ್ಲ ಎಂದು ಹೇಳಿದ್ದಾರೆ.

ವಿನಾಶಕಾರಿ ಕಾನೂನುಗಳನ್ನು ಜಾರಿಗೆ ತಂದು ರೈತರನ್ನು ಆತ್ಮಹತ್ಯೆಗೆ ದೂಡಲು ಹೊರಟಿರುವವರು ಯಾರು? ನ್ಯಾಯಕ್ಕಾಗಿ ಹೋರಾಡುತ್ತಿರುವ ಸ್ವಾಭಿಮಾನಿ ರೈತರ ಮೇಲೆ ಲಾಠಿಯೇಟು, ಅಶ್ರುವಾಯು, ಜಲಫಿರಂಗಿಗಳ ಮೂಲಕ ದೌರ್ಜನ್ಯವೆಸಗುತ್ತಿರುವ ಕೊಲೆಗಡುಕ ಮನಸ್ಸು ಯಾರದು ಬಿ.ಸಿ ಪಾಟೀಲ್? ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com