ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ; ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭ

ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ; ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭ

ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆ ಡಿಸೆಂಬರ್ 7ರ ಸೋಮವಾರದಿಂದ ಆರಂಭಗೊಳ್ಳಲಿದೆ.

ಬೆಂಗಳೂರು:  ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆ ಡಿಸೆಂಬರ್ 7ರ ಸೋಮವಾರದಿಂದ ಆರಂಭಗೊಳ್ಳಲಿದೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು, ಹಾವೇರಿ, ಹಿರೇಕೆರೂರು ಹಾಗೂ ರಟ್ಟೀಹಳ್ಳಿ ತಾಲೂಕಿನ 104 ಗ್ರಾಮ ಪಂಚಾಯತಿಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ.

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯತಿಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ. ಜಿಲ್ಲೆಯಲ್ಲಿಯೂ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದ ಚುನಾವಣೆಗೆ ಸೋಮವಾರ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ದಿನಾಂಕ 11-12-2020 ಕೊನೆಯ ದಿನವಾಗಿದೆ. ಆಯಾ ಗ್ರಾಮ ಪಂಚಾಯತಿಗಳಲ್ಲಿ ಚುನಾವಣಾ ಅಧಿಕಾರಿಗಳಿಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಬಹುದು. 

Related Stories

No stories found.

Advertisement

X
Kannada Prabha
www.kannadaprabha.com