ಕೋರ್ ಕಮಿಟಿ ಸಭೆಗೆ ಕೊರೋನಾ ಅಡ್ಡಿಯಾಗಿಲ್ಲವೇ, ಕಾರ್ಯಕಾರಿಣಿ ಕೇವಲ ಚುನಾವಣೆ ಗಿಮಿಕ್: ಹೆಬ್ಬಾಳ್ಕರ್ ಲೇವಡಿ

ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಕೊರೋನಾ ಕಾರಣದಿಂದಾಗಿ ಸುವರ್ಣ ವಿಧಾನಸೌಧದಲ್ಲಿ ನಡೆಸಲಾಗುತ್ತಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ, ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ಕೊರೊನಾ ಅಡ್ಡಿ ಆಗುವುದಿಲ್ಲವೇ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್
ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನವನ್ನು ಕೊರೋನಾ ಕಾರಣದಿಂದಾಗಿ ಸುವರ್ಣ ವಿಧಾನಸೌಧದಲ್ಲಿ ನಡೆಸಲಾಗುತ್ತಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಆದರೆ, ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಲು ಕೊರೊನಾ ಅಡ್ಡಿ ಆಗುವುದಿಲ್ಲವೇ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.

ಎರಡು ಬಾರಿ ಪ್ರವಾಹ ಉಂಟಾಗಿ ಅಪಾರ ನಷ್ಟವಾದರೂ ಸರ್ಕಾರ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ಒದಗಿಸಿಲ್ಲ. ಕೇಂದ್ರವೂ ರಾಜ್ಯದ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಬರಬೇಕಾದ ಜಿಎಸ್‌ಟಿ ಹಣವನ್ನೂ ಕೊಟ್ಟಿಲ್ಲ. ಹೀಗಿರುವಾಗ ಇಲ್ಲಿ ಕಾರ್ಯಕಾರಿಣಿ ನಡೆಸುವುದು ರಾಜಕೀಯ ಗಿಮಿಕ್ ಆಗಬಾರದು’ ಪ್ರವಾಹ ಸಂಬಂಧ ಸರ್ಕಾರ ಶ್ವೇತ ಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.

‘ಪ್ರವಾಹ ಪರಿಹಾರಕ್ಕೆ ಕೋವಿಡ್ ಕಾರಣದಿಂದ ಅನುದಾನದ ಕೊರತೆ ಎನ್ನುವ ಸರ್ಕಾರ, ಬೇರೆಯದಕ್ಕೆಲ್ಲ ಅನಗತ್ಯವಾಗಿ ಖರ್ಚು ಮಾಡುತ್ತಿದೆ. ಸರ್ಕಾರದ ದೃಷ್ಟಿ ಕೇವಲ ಚುನಾವಣೆಯತ್ತ ಮಾತ್ರವೇ ಇದೆ. ಜನರ ಹಿತವನ್ನು ಸಂಪೂರ್ಣ ಕಡೆಗಣಿಸಿದೆ’ ಎಂದು ಆರೋಪಿಸಿದ್ದಾರೆ.

ಕಳೆದ ಎರಡು ಬಾರಿಯಿಂದ ಬಿಜೆಪಿ ಸರ್ಕಾರ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸದಿರುವುದು ದುರಾದೃಷ್ಟಕರ, ಬೆಳಗಾವಿಯ ಹಲವು ಗ್ರಾಮೀಣ ಭಾಗದ ರಸ್ತೆಗಳು ಹಾಳಾಗಿವೆ,  ಹಣವನ್ನು ಕೇಳಿದಾಗ, ನಾವು ಸರ್ಕಾರದಿಂದ ಸಾಮಾನ್ಯ ಉತ್ತರವನ್ನು ಪಡೆಯುತ್ತೇವೆ. ಆದರೆ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಿ ಸಭೆ ನಡೆಸಲು ಹಣ ಹೇಗೆ ಇದೆ, ”ಎಂದು
ಅವರು ಪ್ರಶ್ನಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com