ಬಿಜೆಪಿ, ಜೆಡಿಎಸ್ ಸಾಂಪ್ರದಾಯಿಕ ಮಿತ್ರ ಪಕ್ಷಗಳು- ಜಗದೀಶ್ ಶೆಟ್ಟರ್

ಬಿಜೆಪಿ ಮತ್ತು ಜೆಡಿಎಸ್ ಸಾಂಪ್ರದಾಯಿಕ ಮಿತ್ರಪಕ್ಷಗಳಾಗಿದ್ದು, ಎರಡೂ ಪಕ್ಷಗಳು ಒಟ್ಟಾಗಿ ಕಾಂಗ್ರೆಸ್ ನ ವಿಧಾನ ಪರಿಷತ್ ಸಭಾಪತಿ ಕೆ ಪ್ರತಾಪ್ ಚಂದ್ರಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಜಯಿಸಲಾಗುವುದು ಎಂದು ಕೈಗಾರಿಕಾ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಸಾಂಪ್ರದಾಯಿಕ ಮಿತ್ರಪಕ್ಷಗಳಾಗಿದ್ದು, ಎರಡೂ ಪಕ್ಷಗಳು ಒಟ್ಟಾಗಿ ಕಾಂಗ್ರೆಸ್ ನ ವಿಧಾನ ಪರಿಷತ್ ಸಭಾಪತಿ ಕೆ ಪ್ರತಾಪ್ ಚಂದ್ರಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಜಯಿಸಲಾಗುವುದು ಎಂದು ಕೈಗಾರಿಕಾ ಸಚಿವ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಬೆಂಬಲವನ್ನು ಬಿಜೆಪಿ ಸ್ವಾಗತಿಸುತ್ತದೆ. ಗಾಂಧಿ ಕುಟುಂಬವನ್ನು ಹೊರತುಪಡಿಸಿ ಕಾಂಗ್ರೆಸ್ ಪಕ್ಷ ಯಾರನ್ನೂ ಬೆಳೆಯಲು ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಈಗ ಅರಿತುಕೊಂಡಿದ್ದಾರೆ. ಕಾಂಗ್ರೆಸ್‍ ನಿಂದ ಮೋಸ ಹೋಗಿದ್ದಕ್ಕೆ ಕುಮಾರಸ್ವಾಮಿ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ

2018 ರ ಚುನಾವಣೆಯ ನಂತರ ಜೆಡಿಎಸ್ ಬಿಜೆಪಿಯನ್ನು ಬೆಂಬಲಿಸಿದ್ದರೆ ಅವರು (ಕುಮಾರಸ್ವಾಮಿ) ಅಧಿಕಾರದಲ್ಲಿರುತ್ತಿದ್ದರು ಎಂದ ಶೆಟ್ಟರ್ ಬಹುಪಾಲು ರಾಜಕೀಯ ಪಕ್ಷಗಳು ಕಾಂಗ್ರೆಸ್ ಅನ್ನು ವಿರೋಧಿಸುವ ಉದ್ದೇಶದಿಂದಲೇ ಹುಟ್ಟಿಕೊಂಡಿವೆ ಎಂದು ಅವರು ಪ್ರತೊಪಾದಿಸಿದ್ದಾರೆ.

ಇನ್ನೊಂದೆಡೆ "ಕಾಂಗ್ರೆಸ್ ಭಾಸ್ಮಾಸುರ" ಎಂದು ತಡವಾಗಿಯಾದರೂ  ಕುಮಾರಸ್ವಾಮಿಯವರಿಗೆ ಸಾಕ್ಷಾತ್ಕಾರವಾಗಿರುವುದನ್ನು ಕೇಂದ್ರ ಅರೆಸೈನಿಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ವಾಗತಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com