'ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ: ಕಾಂಗ್ರೆಸ್‌ನ ದೌಲತ್ತು ಅದರ ದುಸ್ಥಿತಿಗೆ ಕಾರಣ'

ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಇದನ್ನು ಈ ವೇಳೆಯಲ್ಲಿ ತಿಳಿಯ ಬಯಸುತ್ತೇನೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್ ನ ಜಾತ್ಯತೀತತೆ ಬಹಿರಂಗವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಇದನ್ನು ಈ ವೇಳೆಯಲ್ಲಿ ತಿಳಿಯ ಬಯಸುತ್ತೇನೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಜೆಡಿಎಸ್ ನ ಜಾತ್ಯತೀತತೆಯ ಪರೀಕ್ಷೆ ನಡೆಯುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆ ದುರಹಂಕಾರದ್ದು. ಬೆಂಬಲ ಕೇಳದಿದ್ದರೂ ಬೆಂಬಲಿಸಲು ನಾವೇನು ಗುಲಾಮರಲ್ಲ. ಕಾಂಗ್ರೆಸ್ಸಿನ ದೌಲತ್ತೇ ಅದರ ದುಸ್ಥಿತಿಗೆ ಕಾರಣ ಎಂದು ಟ್ವೀಟ್ ಮಾಡಿದ್ದಾರೆ.

“ನಮ್ಮ ಧರ್ಮ, ದೇವರಲ್ಲಿ ಆಳ ನಂಬಿಕೆ ಹೊಂದಿಯೂ, ಎಲ್ಲರ ನಂಬಿಕೆಗಳನ್ನು ಗೌರವಿಸುವುದು, ಎಲ್ಲರನ್ನೂ ಸಮಾನವಾಗಿ ಕಾಣುವುದು” ದೇವೇಗೌಡರ ಜಾತ್ಯತೀತೆ ಎಂಬುದನ್ನು ಸಂದರ್ಭ ಸಿಕ್ಕಾಗ ಹೇಳಿದ್ದೇನೆ. ಆದರೆ ಕಾಂಗ್ರೆಸ್, ಸಿದ್ದರಾಮಯ್ಯರ ವ್ಯಾಖ್ಯಾನ ಇದಕ್ಕೆ ವಿರುದ್ಧವಾದ್ದು. ಜಾತಿಗಳನ್ನು ಒಡೆಯುವುದು, ಅನಗತ್ಯ ಓಲೈಕೆಯೇ ಅವರ ಜಾತ್ಯತೀತತೆ.

ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂಬ ಕಾಂಗ್ರೆಸ್ಸಿಗರ ಸವಕಲು ಆರೋಪಕ್ಕೆ ಈ ಹಿಂದೆಯೇ ಉತ್ತರ ನೀಡಿದ್ದೇನೆ. ಈಗಲೂ ಹೇಳುತ್ತೇನೆ. ಕಾಂಗ್ರೆಸ್ಸೇ ಜೆಡಿಎಸ್ನ ಬಿ ಟೀಂ.ಕರ್ನಾಟಕ ಪ್ರದೇಶ ಕಾಂಗ್ರೆಸ್ನ ಪಕ್ಕದಲ್ಲಿ ಆವರಣ(ಬ್ರಾಕೆಟ್) ಹಾಕಿ ಅದರಲ್ಲಿ ಜೆಡಿಎಸ್ ಎಂದು ಬರೆದಾಗಷ್ಟೇ ಅದರ ಹೆಸರು ಪೂರ್ಣವಾಗುತ್ತದೆ. ಅಷ್ಟರ ಮಟ್ಟಿಗೆ ಅಲ್ಲಿ ಜೆಡಿಎಸ್ ಇದೆ.

ಜಾತ್ಯತೀತ ನಿಲುವಿನ ಬಗ್ಗೆ! ದೇವೇಗೌಡರ ಬದ್ದತೆ ಬಗ್ಗೆ ನಾವು ನಿಮ್ಮಿಂದ ಉಪದೇಶ ಕೇಳಬೇಕಿಲ್ಲ. ದೇವೇಗೌಡರ ಬದ್ಧತೆಯನ್ನು ಬಳಸಿಕೊಂಡು ಬ್ಲ್ಯಾಕ್ಮೇಲ್ ಮಾಡಿದ ಕಾಂಗ್ರೆಸ್ ಇವತ್ತು ಜೆಡಿಎಸ್ ನ ನಿಲುವನ್ನು ಪ್ರಶ್ನಿಸುವ ಯಾವ ನೈತಿಕತೆ ಉಳಿಸಿಕೊಂಡಿದೆ ಎಂದು ಪ್ರಶ್ನಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com