ಜೆಡಿಎಸ್ ತೊರೆದು 'ಕೈ' ಹಿಡಿದ ಜೀವಿಜಯ

ಹಿರಿಯ ರಾಜಕಾರಣಿ, ಮಾಜಿ ಸಚಿವ ಜೀವಿಜಯ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಜೆಡಿಎಸ್ ನಾಯಕರಾದ ಜೀವಿಜಯ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಜೆಡಿಎಸ್ ನಾಯಕರಾದ ಜೀವಿಜಯ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವ ಜೀವಿಜಯ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ‌ಪಕ್ಷದ‌ ನಾಯಕ ‌ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಮಾಜಿ ಬಿ.ಎ. ಜೀವಿಜಯ ಹಾಗೂ ಅವರ ಅನೇಕ ಬೆಂಬಲಿಗರನ್ನು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸಚಿವ ಜಮೀರ್ ಅಹ್ಮದ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಈ ಸಂದರ್ಭ ಮಾತನಾಡಿದ ಜೀವಿಜಯ, ಬೆಂಬಲಿಗರ ಅಭಿಪ್ರಾಯ ಪಡೆದು ಕಾಂಗ್ರೆಸ್ ಸೇರ್ಪಡೆ ಆಗಿದ್ದೇನೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮವಹಿಸುತ್ತೇವೆ ಎಂದರು.

ಡಿ ಕೆ ಶಿವಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಜೀವಿಜಯ ಸೇರ್ಪಡೆ ಕೊಡಗಿನಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಕಾರಣವಾಗಲಿದೆ. ಜಾತ್ಯತೀತ ಮತಗಳು ವಿಭಜನೆ ತಡೆಗಟ್ಟುವ ನಿಟ್ಟಿನಲ್ಲಿ ಸೇರ್ಪಡೆ ಅಗತ್ಯವಾಗಿತ್ತು ಎಂದು ಹೇಳಿದರು.

ಎಂ. ಎಲ್. ಸಿ. ವೀಣಾ ಅಚ್ಚಯ್ಯ, ಕೊಡಗು ಕಾಂಗ್ರೆಸ್ ಅಧ್ಯಕ್ಷ ಕೆ ಕೆ ಮಂಜುನಾಥ್ ಕುಮಾರ್. ಮುಖಂಡ ಚಂದ್ರಮೌಳಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಈ ಮೂಲಕ ಜೆಡಿಎಸ್ ಗೆ ಜೀವಿಜಯ ವಿದಾಯ ಹೇಳಿದಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com