ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧ, ಎಪಿಎಂಸಿ ಕಾಯ್ದೆಗಳನ್ನು ರದ್ದುಪಡಿಸುತ್ತೇವೆ: ಕಾಂಗ್ರೆಸ್

ಮತ್ತೆ ಅಧಿಕಾರಕ್ಕೆ ಬರುವಂತೆ ಮಾಡಿದ್ದೇ ಆದರೆ, ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಎಪಿಎಂಸಿ ಹಾಗೂ ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸುತ್ತೇವೆಂದು ಕಾಂಗ್ರೆಸ್ ಹೇಳಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಮತ್ತೆ ಅಧಿಕಾರಕ್ಕೆ ಬರುವಂತೆ ಮಾಡಿದ್ದೇ ಆದರೆ, ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಎಪಿಎಂಸಿ ಹಾಗೂ ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸುತ್ತೇವೆಂದು ಕಾಂಗ್ರೆಸ್ ಹೇಳಿದೆ. 

ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮಾತನಾಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೇ ಆದರೆ, ರೈತ ವಿರೋಧಿ ಕಾನೂನುಗಳನ್ನು ರದ್ದುಪಡಿಸುವುದಾಗಿ ಹೇಳಿದ್ದಾರೆ. 

ಅಲ್ಲದೆ, ಇದೇ ವೇಲೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಮತ್ತೆ ಜೆಡಿಎಸ್ ಜೊತೆಗೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ. ಈಗ ಸೋನಿಯಾ ಗಾಂಧಿಯವರಿಗೂ ಜೆಡಿಎಸ್ ಬಣ್ಣ ಗೊತ್ತಾಗಿದೆ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಬರೀ ಸುಳ್ಳನ್ನೇ ಹೇಳುತ್ತಿದ್ದರು. ಯಾರಾದರೂ ಅರಮನೆ ಬರೆದುಕೊಡು ಎಂದಿದ್ದಾರೆ ಓಕೆ ಎನ್ನುತ್ತಿದ್ದರು. ಮುಂದೆ ಯಾವುದೇ ಕಾರಣಕ್ಕೂ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈಗಾಗಲೇ ಎಐಸಿಸಿಗೆ 200 ಪುಟದ ವರದಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com