ಮೊದಲ ಹಂತದ ಪಂಚಾಯತ್ ಚುನಾವಣೆ: 4,000 ಸ್ಥಾನಗಳು ಅವಿರೋಧ ಆಯ್ಕೆ, ಪರಿಶೀಲನೆಗೆ ಆಯೋಗ ಮುಂದು!

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಂಚಾಯತ್ ಸ್ಥಾನಗಳನ್ನು ಹರಾಜು ಹಾಕಿರುವುದು ಗಣನೀಯವಾಗಿ ಹೆಚ್ಚಳವಾಗಿದ್ದು, ಇದಕ್ಕೆ ರಾಜ್ಯ ಚುನಾವಣಾ ಆಯೋಗದ ನೀಡಿರುವ ಅಂಕಿ ಅಂಶಗಳು ಪುಷ್ಟಿ ನೀಡಿದೆ.
ತಿಪಟೂರಿನಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಮತದಾನದ ಬಹಿಷ್ಕಾರದ ಚರ್ಚೆ ನಡೆಸುತ್ತಿರುವ ಹೊನ್ನಾವಳ್ಳಿ ಗ್ರಾಮದ ನಿವಾಸಿಗಳು
ತಿಪಟೂರಿನಲ್ಲಿ ನಡೆಯಲಿರುವ ಗ್ರಾಮ ಪಂಚಾಯಿತಿ ಮತದಾನದ ಬಹಿಷ್ಕಾರದ ಚರ್ಚೆ ನಡೆಸುತ್ತಿರುವ ಹೊನ್ನಾವಳ್ಳಿ ಗ್ರಾಮದ ನಿವಾಸಿಗಳು

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಂಚಾಯತ್ ಸ್ಥಾನಗಳನ್ನು ಹರಾಜು ಹಾಕಿರುವುದು ಗಣನೀಯವಾಗಿ ಹೆಚ್ಚಳವಾಗಿದ್ದು, ಇದಕ್ಕೆ ರಾಜ್ಯ ಚುನಾವಣಾ ಆಯೋಗದ ನೀಡಿರುವ ಅಂಕಿ ಅಂಶಗಳು ಪುಷ್ಟಿ ನೀಡಿದೆ.

ಇಡೀ ದೇಶದಲ್ಲಿಯೇ ಅತ್ಯಂತ ಕೆಟ್ಟ ಪರಂಪರೆಗೆ ನಾಂದಿ ಹಾಡಿರುವ ಈ ಪಿಡುಗು ರಾಜ್ಯದಲ್ಲಿ ವ್ಯಾಪಕವಾಗಿರುವುದು ಕಂಡು ಬಂದಿದೆ. ಇದೇ 22 ರಂದು ನಡೆಯುಲಿರುವ ಮೊದಲ ಹಂತದ ಚುನಾವಣೆಯಲ್ಲಿ ಒಟ್ಟು 4,377 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಇದರಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪಂಚಾಯತ್ ಸ್ಥಾನಗಳು ಹರಾಜಿಗೆ ಒಳಗಾಗಿರುವ ಸಾಧ್ಯತೆಗಳಿವೆ ಎಂದು ಆಯೋಗದ ಮೂಲಗಳು ಸ್ಪಷ್ಟಪಡಿಸಿವೆ.

ಪಂಚಾಯತ್ ಸ್ಥಾನಗಳನ್ನು ಹರಾಜು ಹಾಕುವುದನ್ನು ತಡೆಯಲು ಆಯೋಗ ವ್ಯಾಪಕ ಕ್ರಮಗಳನ್ನು ಕೈಗೊಂಡಿತ್ತು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಆದೇಶ ನೀಡಿದ್ದರು.

ಡಿ.22 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. 3019 ಗ್ರಾಮ ಪಂಚಾಯಿತಿಗಳಲ್ಲಿ 48,048 ಒಟ್ಟು ಸ್ಥಾನಗಳಿದ್ದು, ಈ ಪೈಕಿ 43,238 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ 4,377 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಯೋಗವು 1,64,550 ನಾಮಪತ್ರಗಳನ್ನು ಸ್ವೀಕರಿಸಿದ್ದು, 1,57,735 ನಾಮಪತ್ರಗಳು ಕ್ರಮಬದ್ಧವಾಗಿದ್ದವು. 40,352 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದುಕೊಂಡಿದ್ದರು. 

ಗ್ರಾಮ ಪಂಚಾಯಿತಿ ಚುನಾವಣೆಗಳು ಪಕ್ಷ ರಹಿತ ಚುನಾವಣೆಯಾಗಿರುತ್ತವೆ. ರಾಜಕೀಯ ಪಕ್ಷಗಳು ಈ ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವುದು, ಸಭೆ, ಸಮಾರಂಭಗಳನ್ನು ನಡೆಸುವ, ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಕರ ಪತ್ರದಲ್ಲಿ ಮುದ್ರಿಸಿ ಪಕ್ಷಗಳ ಬಾವುಟಗಳ ಮತ್ತು ಚಿಹ್ನೆಯನ್ನು ಬಳಸುವಂತಿಲ್ಲ. ರಾಜಕೀಯ ಪಕ್ಷದ ಮುಖಂಡರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದಲ್ಲಿ ಮತದಾರರ ಮೇಲೆ ಪ್ರಭಾವ ಬೀರಿದಂತಾಗುತ್ತದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಹೀಗಾಗಿ ನ್ಯಾಯಯುತವಾದ ಚುನಾವಣೆಗೆ ಸಹಕರಿಸಬೇಕು ಎಂದಿದೆ.

ಕೆಲವರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಂಚಾಯತ್ ಸ್ಥಾನಗಳನ್ನು ಹರಾಜು ಹಾಕಿದ್ದಾರೆಂಬ ಆರೋಪಗಳು ಕೇಳಿಬಂದಿವೆ. ಕೆಲ ಪ್ರದೇಶಗಳಲ್ಲಿ ಸ್ಥಳೀಯ ರಾಜಕೀಯ ನಾಯಕರು ತಮ್ಮ ಪ್ರಭಾವ ಬಳಸಿ ತಮ್ಮ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವಂತೆ ಮಾಡುತ್ತಿದ್ದಾರೆಂದು ಹೇಳಲಾಗುತ್ತಿದೆ. ಆರೋಪಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com