ಕೋಡಿಹಳ್ಳಿ ಆಸ್ತಿ ತನಿಖೆಗೆ ರೇಣುಕಾಚಾರ್ಯ ಆಗ್ರಹ

ರೈತರ ಹೋರಾಟದ ಹೆಸರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಭಾರೀ ಪ್ರಮಾಣದ ಅಕ್ರಮ ಆಸ್ತಿ ಸಂಪಾದಿಸಿದ್ದು, ಕೂಡಲೇ ಸರ್ಕಾರ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್-ಎಂಪಿ ರೇಣುಕಾಚಾರ್ಯ
ಕೋಡಿಹಳ್ಳಿ ಚಂದ್ರಶೇಖರ್-ಎಂಪಿ ರೇಣುಕಾಚಾರ್ಯ

ಬೆಂಗಳೂರು: ರೈತರ ಹೋರಾಟದ ಹೆಸರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಭಾರೀ ಪ್ರಮಾಣದ ಅಕ್ರಮ ಆಸ್ತಿ ಸಂಪಾದಿಸಿದ್ದು, ಕೂಡಲೇ ಸರ್ಕಾರ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ರೈತರಿಗೆ ರೈತ ಸಂಘಟನೆ ಹೆಸರಿನಲ್ಲಿ ವಂಚನೆ ಮಾಡಿ ಬೆಲೆ ಬಾಳುವ ಕಾರುಗಳು, ಬಂಗಲೆ, ಆಸ್ತಿ ಸೇರಿದಂತೆ ಕುಟುಂಬ ಸದಸ್ಯರು ಹಾಗೂ ಸಂಬಂಧಿಕರ ಹೆಸರಿನಲ್ಲಿ ಅಕ್ರಮವಾಗಿ ಆಸ್ತಿಯನ್ನು ಸಂಪಾದನೆ ಮಾಡಿದ್ದಾರೆ. ಹೀಗಾಗಿ ಸರ್ಕಾರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಸ್ತವವಾಗಿ ಕೋಡಿಹಳ್ಳಿ ಚಂದ್ರಶೇಖರ್ ರೈತ ಹೋರಾಟಗಾರನೇ ಅಲ್ಲ. ಅವನೊಬ್ಬ ನಕಲಿ ಹೋರಾಟಗಾರ. ಪವಿತ್ರವಾದ ಹಸಿರು ಶಾಲು ಹಾಕಿಕೊಂಡು ರೈತರಿಗೆ ನ್ಯಾಯ ಕೊಡಿಸುತ್ತೇನೆ ಎಂದು ಮೋಸ ಮಾಡುವ ದಲ್ಲಾಳಿ. ಇಂತಹ ನಕಲಿ  ನಾಯಕನನ್ನು ಯಾರೊಬ್ಬರು ನಂಬಬಾರದು ಎಂದು ಅವರು ರೈತ ಸಮುದಾಯದವರಲ್ಲಿ ಮನವಿ ಮಾಡಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್-ಜೆಡಿಎಸ್ ಅಧಿಕಾರದಲ್ಲಿದ್ದಾಗ ಮೈಸೂರು, ಮಂಡ್ಯ ಸೇರಿದಂತೆ ನಾನಾ ಭಾಗಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡರು. ಅವಾಗ ಈ ನಕಲಿ ನಾಯಕ ಅವರ ಕುಟುಂಬದವರನ್ನು ಭೇಟಿಯಾಗಿ ಒಂದು ಸಾಂತ್ವನವನ್ನೂ ಹೇಳಲಿಲ್ಲ.  ಯಾವ ಸರ್ಕಾರಗಳ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದೇ ಸಾಧನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು.

ಕರ್ನಾಟಕದ ಇತಿಹಾಸದಲ್ಲಿ ಹಸಿರು ಶಾಲೆಗೆ ತನ್ನದೇ ಆದ ಪಾವಿತ್ರತೆಯಿದೆ. ರೈತರಿಗೆ ಅನ್ಯಾಯವಾದಾಗ ನ್ಯಾಯ ಕೊಡಿಸಲು ರೈತರು ಬೀದಿಗಿಳಿದು ಹೋರಾಟ ಮಾಡುತ್ತಾರೆ. ಆದರೆ ಕೋಡಿಹಳ್ಳಿ ಹಸಿರು ಶಾಲು ಮೂಲಕ ಬ್ಲಾ ಕ್ಮೇದಲ್ ಮಾಡಿಕೊಂಡು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ  ಎಂದು ದೂರಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com