ಬೆಳಗಾವಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಎಐಎಂಐಎಂ ಅದೃಷ್ಟ ಪರೀಕ್ಷೆ!

ದೇಶದ ವಿವಿಧ ಭಾಗಗಳಲ್ಲಿ ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎಐಎಂಐಎಂ ಬೆಳಗಾವಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಅಸಾದುದ್ದೀನ್ ಓವೈಸಿ
ಅಸಾದುದ್ದೀನ್ ಓವೈಸಿ

ಬೆಳಗಾವಿ: ದೇಶದ ವಿವಿಧ ಭಾಗಗಳಲ್ಲಿ ರಾಜ್ಯ ವಿಧಾನಸಭೆ ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಎಐಎಂಐಎಂ  ಬೆಳಗಾವಿ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಕಟ್ಟುವ ಸಂಬಂಧ ಬೆಳಗಾವಿಯಲ್ಲಿ ಬುಧವಾರ ಎಐಎಂಐಎಂ ನಾಯಕರು ಸಭೆ ನಡೆಸಿದರು. ತಳಮಟ್ಟದಿಂದ ಪಕ್ಷ ಸಂಘಟಿಸಲು ಮುಂಬರುವ ಚುನಾವಣೆಗಳಲ್ಲಿ ಸ್ಪರ್ಧಿಸುವುದಾಗಿ ಎಐಎಂಐಎಂ ರಾಜ್ಯ ಪ್ರಧಾನ ಕಾರ್ಯದರ್ಶಿ ಲತೀಫ್ ಖಾನ್ ತಿಳಿಸಿದ್ದಾರೆ.

ಅಭ್ಯರ್ಥಿಗಳನ್ನು ಕಣಕ್ಕಳಿಸಲು ಪಕ್ಷ ನಿರ್ಧರಿಸಿದ್ದು, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅಭ್ಯರ್ಥಿಗಳನ್ನು ಫೈನಲ್ ಮಾಡಲಿದ್ದಾರೆ ಎಂದು ಹೇಳಿದ್ದಾರೆ,  ಮೊಹಮದ್ ಸಲೀಂ ನೇತೃತ್ವದಲ್ಲಿ ಉತ್ತರ ಕರ್ನಾಟಕದಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ವಿಜಯಪುರ, ಕಲಬುರಗಿ, ಬಳ್ಳಾರಿ ಮತ್ತು ಹುಬ್ಬಳ್ಳಿಯಲ್ಲಿ ಪಕ್ಷದ ಮುಖಂಡರು ಆಯಾ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಐಎಂಐಎಂ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಸಭೆಯಲ್ಲಿ ಚರ್ಚಿಸಿದರು.

ಸಮರ್ಥ ನಾಯಕರನ್ನು ಕಣಕ್ಕಿಳಿಸಲಾಗುವುದು ಮತ್ತು ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ಬಲವಾದ ಆಕಾರ ನೀಡಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು. ಹಲವಾರು ಪಕ್ಷಗಳು ಮತ್ತು ಸಮುದಾಯಗಳ ನಾಯಕರು ಎಐಎಂಐಎಂಗೆ ಸೇರ್ಪಡೆಯಾಗುತ್ತಿದ್ದು ಎಲ್ಲಾ ಸಮುದಾಯಗಳು ಮತ್ತು ಭಾಷೆಗಳ ಜನರ ಜೊತೆಗೂಡಿ ಬೆಳಗಾವಿ ಸಿಟಿ ಕಾರ್ಪೊರೇಶನ್‌  ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಉದ್ದೇಶವನ್ನು ಪಕ್ಷ ಹೊಂದಿದೆ ಎಂದು ಪಠಾಣ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com