ಕೂಡಲೇ ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಕಾಂಗ್ರೆಸ್

ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ರದ್ಧತಿಗೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್​​ನಲ್ಲಿ ವಜಾಗೊಂಡಿದೆ. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸಿಎಂ ಯಡಿಯೂರಪ್ಪ ವಿರುದ್ಧ ತೀವ್ರವಾಗಿ ಕಿಡಿಕಾರಿದೆ. 
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ

ಬೆಂಗಳೂರು: ಅಕ್ರಮ ಡಿನೋಟಿಫಿಕೇಶನ್ ಪ್ರಕರಣದ ರದ್ಧತಿಗೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್​​ನಲ್ಲಿ ವಜಾಗೊಂಡಿದೆ. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಸಿಎಂ ಯಡಿಯೂರಪ್ಪ ವಿರುದ್ಧ ತೀವ್ರವಾಗಿ ಕಿಡಿಕಾರಿದೆ. 

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಡಿನೋಟಿಫಿಕೇಶನ್ ಪ್ರಕರಣದ ತನಿಖೆ ನಡೆಯುತ್ತಿರುವಾಗ ಯಡಿಯೂರಪ್ಪ ಒಂದು ಸೆಕೆಂಡ್​ ಕೂಡ ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಲು ಹಕ್ಕಿದೆಯೇ? ನ್ಯಾಯಯುತ ತನಿಖೆಯಾಗಬೇಕಾದ್ರೆ ತಡ ಮಾಡದೇ ರಾಜೀನಾಮೆ ನೀಡಬೇಕು. ನಾ ಖಾವೂಂಗಾ ನಾ ಖಾನೆ ದೂಂಗಾ ಎಂಬ ಪ್ರಧಾನಿ ಮೋದಿಯ ವಾಗ್ದಾನಕ್ಕೆ ಈಗ ಪರೀಕ್ಷೆಯ ಸಮಯ ಎಂದಿದ್ದಾರೆ.

ಬೆಳ್ಳಂದೂರು ಬಳಿಯ ಜಮೀನು ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಪ್ರಕರಣ ರದ್ದು ಮಾಡಲು ಹೈಕೋರ್ಟ್ ಮಂಗಳವಾರ ಏಕಸದಸ್ಯಪೀಠ ನಿರಾಕರಿಸಿದೆ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಿದೆ.

ವಾಸುದೇವರೆಡ್ಡಿ ಎಂಬುವವರು 2013ರಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು.  ಮಾಜಿ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧವೂ ಕೇಸ್ ದಾಖಲಾಗಿತ್ತು. ನ್ಯಾ.ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯಪೀಠ ಆದೇಶ ಹೊರಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com