ಬೆಳಗಾವಿ ಗ್ರಾಮೀಣ: ಸದ್ದಿಲ್ಲದೇ ಮತ್ತೊಂದು ಆಪರೇಷನ್ ಮಾಡಿದ ರಮೇಶ್ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಸಾಹುಕಾರ್ ರಮೇಶ್ ಜಾರಕಿಹೊಳಿ ಸದ್ದಿಲ್ಲದೇ ಮತ್ತೊಂದು ಆಪರೇಷನ್ ಮಾಡಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
Published: 24th December 2020 12:20 PM | Last Updated: 24th December 2020 12:41 PM | A+A A-

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಸಾಹುಕಾರ್ ರಮೇಶ್ ಜಾರಕಿಹೊಳಿ ಅವರು ಸದ್ದಿಲ್ಲದೇ ಮತ್ತೊಂದು ಆಪರೇಷನ್ ಮಾಡಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ, ಉಚಗಾಂವ, ಬೆಳಗುಂದಿ, ತುರಮರಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ತಮ್ಮ ಬಿಗಿಹಿಡಿತ ಹೊಂದಿರುವ ಸಚಿವ ರಮೇಶ್ ಜಾರಕಿಹೊಳಿ, ಅವರನ್ನು ಇಂದು ಮಾರಿಹಾಳ ಗ್ರಾಮ ಪಂಚಾಯತ್ ಗೆ ಅವಿರೋಧವಾಗಿ ಆಯ್ಕೆಯಾದ ಬಸವರಾಜ ಮಾದಮ್ಮನವರ, ಮಲ್ಲವ್ವ ಕುಳ್ಳನ್ನವರ, ರೇಖಾ ತಳವಾರ, ಗಂಗವ್ವ ಅಮಾತಿ ಹಾಗೂ ತೌಸೀಫ ಫಣಿಬಂಧ ಅವರು ಭೇಟಿ ಮಾಡಿ ಧನ್ಯವಾದ ಅರ್ಪಿಸಿದರು.
ಪಂಚಾಯತ್ ಚುನಾವಣೆಗಳಲ್ಲಿ ಗೆಲ್ಲುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಅಖಾಡ ಸಿದ್ದಗೊಳಿಸುತ್ತಿರುವ ಸಚಿವ ರಮೇಶ್ ಜಾರಕಿಹೊಳಿ ಎದುರಾಳಿಗಳಲ್ಲಿ ನಡುಕ ಹುಟ್ಟಿಸಿದ್ದಾರೆ.