3,800 ಗ್ರಾಮ ಪಂಚಾಯಿತಿಗಳು ಬಿಜೆಪಿ ತೆಕ್ಕೆಗೆ: ರೈತರ ಪರ ರಾಜ್ಯ ಸರ್ಕಾರ: ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು' 'ಒಟ್ಟು 5,728 ಗ್ರಾಮ ಪಂಚಾಯಿತಿಗಳ ಪೈಕಿ 3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಬಹುಮತ ಲಭಿಸಿದೆ' ಎಂದರು.  ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಫಲವಾಗಿ ಬಿಜೆಪಿಗೆ ಈ ಜಯ ದೊರಕಿದೆ. ವಿಧಾನಸಭಾ ಕ್ಷೇತ್ರಗಳು ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವು ದೊರಕಿದೆ. ಹಿಂದೆ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು ಸಿಕ್ಕಿದೆ ಎಂದರು.

ವಿವಿಧ ಕ್ಷೇತ್ರಗಳ ಕಾರ್ಯಕರ್ತರು ಮತ್ತು ಶಾಸಕರ ಪರಿಶ್ರಮದಿಂದ ಬಿಜೆಪಿ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಹಾಗೆಯೇ ಇದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಕೃಷಿಪರ ನೀತಿಗಳಿಗೆ ರೈತರ ಬೆಂಬಲ ಇರುವುದಕ್ಕೆ ಸಾಕ್ಷಿಯಾಗಿದ ಎಂದೂ ಅಭಿಪ್ರಾಯಪಟ್ಟರು.

ಪ್ರಧಾನಿ ನರೇಂದ್ರ ಮೋದಿ  ನೇತೃತ್ವದಲ್ಲಿ ಎನ್​ಡಿಎ ಸರ್ಕಾರ 2022ರ ವೇಳೆಗೆ ರೈತರ ಆದಾಯವನ್ನ ದ್ವಿಗುಣಗೊಳಿಸುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಿದ್ದಾರೆ. ರೈತರ ಶ್ರೇಯೋಭಿವೃದ್ಧಿಗಾಗಿಯೇ ಕೃಷಿ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತಂದಿದ್ದಾರೆ. ರೈತರು ತಮ್ಮ ಉತ್ಪನ್ನವನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬೇಕೆಂಬ ಬಹುಕಾಲದ ಬೇಡಿಕೆಯನ್ನ ಮೋದಿ ಈಡೇರಿಸಿದ್ಧಾರೆ ಎಂದು ಬಿಎಸ್​ವೈ ಹೇಳಿದರು.

ವಿರೋಧ ಪಕ್ಷಗಳು ನರೇಂದ್ರ ಮೋದಿ ಅವರನ್ನ ಟೀಕೆ ಮಾಡಬಹುದು. ಆದರೆ, ಮೋದಿ ರೂಪಿಸಿರುವ ದೂರದೃಷ್ಟಿ ಕಾರ್ಯಕ್ರಮಗಳನ್ನ ಟೀಕಿಸಲು ಸಾಧ್ಯವಿಲ್ಲ. ಕಿಸಾನ್ ಯೋಜನೆ, ಜಗಜೀವನ್ ಮಿಷನ್ ಯೋಜನೆ, ಮಾಸಿಕ ಪಿಂಚಣಿ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಮೊದಲಾದ ಯೋಜನೆಗಳು ನಮ್ಮ ಮುಂದಿದೆ. ಪ್ರಧಾನಿ ಮೋದಿ ಅವರ
ದೂರದೃಷ್ಟಿಯ ಈ ಕಾರ್ಯಕ್ರಮಗಳನ್ನ ರೈತರು ಅರ್ಥ ಮಾಡಿಕೊಂಡು ತಮ್ಮ ಪ್ರತಿಭಟನೆಗಳನ್ನ ಕೈಬಿಡಬೇಕು ಎಂದು ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com