'ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಜೆಡಿಎಸ್‌ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು'

ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಪಕ್ಷದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು.
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಪಕ್ಷದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಎಲ್ಲಾ ಅಭ್ಯರ್ಥಿಗಳಿಗೆ ಅಭಿನಂದನೆಗಳು ಹಾಗೇ ಸೋತರೂ, ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸದಾ ಇರಲಿದೆ ಎಂದು ಅವರು ಟ್ವೀಟ್‌ನಲ್ಲಿ ಬರೆದಿದ್ದಾರೆ. ಪಕ್ಷವು ಈ ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದವರು ನಮ್ಮ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ.

ಈ ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದವರು ನಮ್ಮ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ. ರಾಜಕೀಯ ಸಂದಿಗ್ದ ಸ್ಥಿತಿಯಲ್ಲಿಯೂ ಪಕ್ಷ ತಳ ಮಟ್ಟದಲ್ಲಿಯೂ ಸ್ಥಿರ, ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿಯಾಗಿ ಇರುವೆ ಎಂದು ಕುಮಾರಸ್ವಾಮಿ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. 

ಗೆದ್ದ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಿಗೆ ದೇವೇಗೌಡ ಅಭಿನಂದನೆ:

ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎರಡು ರಾಷ್ಟೀಯ ಪಕ್ಷಗಳ ವಿರುದ್ಧ ಹೋರಾಟ ನಡೆಸಿ ಇಂದು ಜಯಶೀಲರಾಗಿರುವ ನಮ್ಮ ಪಕ್ಷದ ಎಲ್ಲ ನನ್ನ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಚುನಾವಣೆ ಎಂದ ಮೇಲೆ ಸೋಲು ಗೆಲುವು ಸಹಜ , ಸೋತ ನನ್ನ ಸ್ನೇಹಿತರು ದೃತಿಗೆಡುವುದು ಬೇಡ. ನಿಮ್ಮ ಸಹಾಯ ಮತ್ತು ಈಗ ಪಂಚಾಯಿತಿಗೆ ಆಯ್ಕೆಯಾಗಿರುವ ಸದಸ್ಯರ ಸಹಾಯದಿಂದಲೇ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಜೊತೆಗೂಡಿ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಈ ಪ್ರಾದೇಶಿಕ ಪಕ್ಷವನ್ನು ನಮ್ಮ ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ನಾನು ಹಗಲು ರಾತ್ರಿ ಶ್ರಮಿಸುತ್ತೇನೆ ಎಂದು ಅವರು ಭರವಸೆ ನೀಡಿದ್ದಾರೆ.

ಜೊತೆಗೆ ಈ ರಾಜ್ಯದಲ್ಲಿ ನಮ್ಮ ಪ್ರಾದೇಶಿಕ ಪಕ್ಷವನ್ನು ಉಳಿಸಲು ಈ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ನೀಡಿದ ರಾಜ್ಯದ ಜನತೆಗೆ ನಾನು ಸದಾ ಚಿರಋಣಿಯಾಗಿರುತ್ತೇನೆ ಎಂದು ಎಚ್.ಡಿ. ದೇವೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com