ಪೌರತ್ವ ನಿರಾಕರಣೆ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಬಿಜೆಪಿ ಪ್ರಯತ್ನ: ಸಿದ್ದರಾಮಯ್ಯ ಗಂಭೀರ ಆರೋಪ

 ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಜಾರಿ ಬಗೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಕೇಸರಿ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಸಿಎಎ ವಿರುದ್ಧ ಆಯೋಜಿಸಲಾಗಿದ್ದ  ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ ಅವರು, ಸಂವಿಧಾನದ ಮೂಲ ಸ್ವರೂಪ ಮತ್ತು ಮನೋಭಾವಕ್ಕೆ ವಿರುದ್ಧವಾದ ಇಂತಹ ಕಾನೂನುಗಳನ್ನು ರೂಪಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ ಜಾರಿ ಬಗೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಕೇಸರಿ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರಿನಲ್ಲಿ ಸಿಎಎ ವಿರುದ್ಧ ಆಯೋಜಿಸಲಾಗಿದ್ದ  ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ ಅವರು, ಸಂವಿಧಾನದ ಮೂಲ ಸ್ವರೂಪ ಮತ್ತು ಮನೋಭಾವಕ್ಕೆ ವಿರುದ್ಧವಾದ ಇಂತಹ ಕಾನೂನುಗಳನ್ನು ರೂಪಿಸುವ ಅಧಿಕಾರ ಸರ್ಕಾರಕ್ಕೆ ಇಲ್ಲ ಎಂದು ಹೇಳಿದರು.

ಸಂವಿಧಾನದ ಮೂಲ ಸ್ವರೂಪವನ್ನು ಬದಲಾಯಿಸುವ ಅಧಿಕಾರ ಸಂಸತ್ತಿಗೆ ಅಥವಾ ಸರ್ಕಾರಕ್ಕೆ ಇಲ್ಲ  ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಅವರು, ಬಿಜೆಪಿ ಸರ್ಕಾರವು ಪರೋಕ್ಷವಾಗಿ ಸಂವಿಧಾನವನ್ನು ಬದಲಾಯಿಸಲು ಹೊರಟಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ ಸರ್ಕಾರದ ನೀತಿಗಳು ಸ್ಪಷ್ಟವಾಗಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿಗೆ ವಿರುದ್ಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ನಿರುದ್ಯೋಗ, ಜಿಡಿಪಿಯಲ್ಲಿನ ಕುಸಿತ, ಹಣದುಬ್ಬರ ಮುಂತಾದ ಇನ್ನೂ ಅನೇಕ ಸಮಸ್ಯೆಗಳಿರುವ ಈ ದೇಶದಲ್ಲಿ ಗ ಸಿಎಎ ಅನುಷ್ಠಾನಗೊಳಿಸುವ ಅಗತ್ಯವೇನಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಹಿಂದೂ ಮತದಾರರನ್ನುಒಟ್ಟುಗೂಡಿಸಲು ಹಾಗೂ ಮುಸ್ಲಿಮರನ್ನು ಪ್ರತ್ಯೇಕಿಸಲು ಸರ್ಕಾರವು ಕಾನೂನು ಸುವ್ಯವಸ್ಥೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಆಕ್ರೋಶ ಹೊರಹಾಕಿದ್ದಾರೆ. ನಾಥುರಾಮ್ ಗೋಡ್ಸೆಯಂತಹವರನ್ನು ವೈಭವೀಕರಿಸುವುದು ಕೇಸರಿ ಪಕ್ಷದ ವಿಚಾರಧಾರೆಯಾಗಿದ್ದು ಅಂತಹವರೀಗ ಸಿಎಎ ಜಾರಿ ಮಾಡಿದ್ದಾರೆ ಎಂದ ಸಿದ್ದರಾಮಯ್ಯ ದೆಹಲಿಯಲ್ಲಿ ನಡೆದ ದಾಳಿಯಲ್ಲಿ ಭಾಗಿಯಾದವರನ್ನು ಬಂಧಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು. "ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಜನಸಾಮಾನ್ಯರಿಗೆ ಶಿಕ್ಷಣ ನೀಡುವಲ್ಲಿ ಕಾಂಗ್ರೆಸ್ ನಿಲುವು ತೆಗೆದುಕೊಳ್ಳುತ್ತದೆಬಿಜೆಪಿಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರು ಸಿಎಎ ವಿಚಾರವಾಗಿ  ಜನರನ್ನು ದಾರಿ ತಪ್ಪಿಸಿದ್ದಾರೆ, ಆದರೆ ಜನರು ತಪ್ಪು ಮಾಹಿತಿ ಪಡೆಯುವುದನ್ನು ಕಾಂಗ್ರೆಸ್ ಬಯಸುವುದಿಲ್ಲ ”ಎಂದು ಅವರು ಹೇಳಿದರು.

ದಲಿತರಿಗೆ ಪೌರತ್ವ ನೀಡುವುದನ್ನು ಕಾಂಗ್ರೆಸ್ ವಿರೋಧಿಸುತ್ತಿದೆ ಎಂಬ ಬಿಜೆಪಿ ಹೇಳಿಕೆ ವಿವರಿಸಿದ ಸಿದ್ದರಾಮಯ್ಯ  ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ  ದಲಿತ ಮುದಾಯದ ಮೇಲೆ ಅನೇಕ ರೀತಿಯ ದಾಳಿಗಳು ಮತ್ತು ದೌರ್ಜನ್ಯ ನಡೆದಿದೆ. ಆ ಕುರಿತು ಕೇಸರಿ ಪಕ್ಷ ಮಾತನಾಡಬೇಕು, ಪೌರತ್ವವನ್ನು ನಿರಾಕರಿಸುವ ಮೂಲಕ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಜೆಪಿ ಬಯಸಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com