ಆದೇಶ ಸಿಕ್ಕಿದ್ದೇ ಆದರೆ ಪಕ್ಷದ ಕಚೇರಿ ಗುಡಿಸಲು ಸಿದ್ಧ: ಶಾಸಕ ಮಹೇಶ್ ಕುಮಟಳ್ಳಿ

ಚುನಾವಣೆಯಲ್ಲಿ ಗೆಲುವು ಸಾಧಿಸಿದ 11 ಶಾಸಕರ ಪೈಕಿ 10 ಮಂದಿಗೆ ಸಚಿವ ಸ್ಥಾನ ನೀಡುವುದಾಕಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದು, ರಮೇಶ್ ಜಾರಕಿಹೊಳಿ ಆಪ್ತ ಮಹೇಶ್ ಕುಮಟಳ್ಳಿಯವರಿಗೆ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಅನುಮಾನವಾಗಿದೆ. ಇದರಿಂದ ಸಹಜವಾಗಿಯೇ ಕುಮಟಳ್ಳಿಯವರು ಬೇಸರಗೊಂಡಿದ್ದಾರೆ. 
ಮಹೇಶ್ ಕುಮಟಳ್ಳಿ
ಮಹೇಶ್ ಕುಮಟಳ್ಳಿ

ಬೆಂಗಳೂರು: ಚುನಾವಣೆಯಲ್ಲಿ ಗೆಲುವು ಸಾಧಿಸಿದ 11 ಶಾಸಕರ ಪೈಕಿ 10 ಮಂದಿಗೆ ಸಚಿವ ಸ್ಥಾನ ನೀಡುವುದಾಕಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದು, ರಮೇಶ್ ಜಾರಕಿಹೊಳಿ ಆಪ್ತ ಮಹೇಶ್ ಕುಮಟಳ್ಳಿಯವರಿಗೆ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಅನುಮಾನವಾಗಿದೆ. ಇದರಿಂದ ಸಹಜವಾಗಿಯೇ ಕುಮಟಳ್ಳಿಯವರು ಬೇಸರಗೊಂಡಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಟಳ್ಳಿಯವರು, ಎಲ್ಲರೂ ಬನ್ನಿ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಇಂದಿನ ವಾತಾವರಣ ಇದಕ್ಕೆ ವ್ಯತಿರಿಕ್ತವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಮೇಶ್ ಜಾರಕಿಹೊಳಿಯವರೊಂದಿಗೆ ವಿಶ್ವಾಸವನ್ನಿಟ್ಟು ಬಂದಿದ್ದೇನೆ. ಪರಿಸ್ಥಿತಿಯಿಂದ ಇಂದು ಮನಸ್ಸಿಗೆ ನೋವಾಗಿದೆ ಎಂದು ಹೇಳಿದ್ದಾರೆ. 

ಬಿಜೆಪಿ ಪಕ್ಷದ ಹಲವು ಹಿರಿಯ ನಾಯಕರು ಹಾಗೂ ಶಾಸಕರು ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ತಿಳಿಸಿದ್ದರು. ಈ ವೇಳೆ ನಾನೇನನ್ನೂ ಕೇಳಿರಲಿಲ್ಲ. ಆದರೂ, ಸಾಕಷ್ಟು ಭರವಸೆಗಳನ್ನು  ನೀಡಿದ್ದರು. ಇದೀಗ ಪರಿಸ್ಥಿತಿ ಬದಲಾಗಿದೆ. ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಕಷ್ಟು ತ್ಯಾಗವನ್ನು ಮಾಡಿದ್ದೇವೆ. ರಮೇಶ್ ಜಾರಕಿಹೊಳಿ ಹಾಗೂ ಯಡಿಯೂರಪ್ಪ ಅವರನ್ನು ನಂಬಿ ನಾವು ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇವ. ಈಗಲೂ ತ್ಯಾಗ ಮಾಡಲು ನಾನು ಸಿದ್ಧನಿದ್ದೇನೆ. ನನ್ನನ್ನು ಸಚಿವನಾಗಿ ಮಾಡಲು ಸಾಧ್ಯವಿಲ್ಲದೇ ಹೋದರೆ, ವಿಶ್ವನಾಥ್ ಅವರನ್ನಾದರೂ ಸಚಿವರನ್ನಾಗಿ ಮಾಡಲಿ. ಪಕ್ಷ ಆದೇಶಿಸಿದ್ದೇ ಆದರೆ, ಕಚೇರಿಯನ್ನು ಗುಡಿಸಲು ನಾನು ಸಿದ್ಧನಿದ್ದೇನೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com