ವಿಧಾನ ಪರಿಷತ್ ಗೆ ಲಕ್ಷ್ಮಣ ಸವದಿ ಅವಿರೋಧ ಆಯ್ಕೆ?: ಜೆಡಿಎಸ್ ಅಭ್ಯರ್ಥಿ ಕಣಕ್ಕೆ?

ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಫೆ.17ನೇ ತಾರೀಕಿನಂದು ಚುನಾವಣೆ ನಡೆಯಲಿದೆ.
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ

ಬೆಂಗಳೂರು: ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಫೆ.17ನೇ ತಾರೀಕಿನಂದು ಚುನಾವಣೆ ನಡೆಯಲಿದೆ.

 ಈ ಚುನಾವಣೆಯಲ್ಲಿ ವಿಧಾನಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರನ್ನು ಹೊಂದಿರುವ ಬಿಜೆಪಿಯೇ ಗೆಲ್ಲುವು ಸಾಧಿಸುವುದು ಬಹುತೇಕ ಖಚಿತವಾಗಿದೆ. 

ಈ ಮಧ್ಯೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನಾಂಕವಾಗಿದೆ. ಹಾಗಾಗಿಯೇ ವಿಧಾನ ಪರಿಷತ್​​ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಬುಧವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಡಿಸಿಎಂ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಸಲಿದ್ದಾರೆ. 

ಇನ್ನು ಒಂದು ವಿಧಾನ ಪರಿಷತ್​​ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಗೆಲ್ಲುವುದು ಖಚಿತ. ಬಿಜೆಪಿ ಅಭ್ಯರ್ಥಿ ವಿಧಾನಸಭೆಯಿಂದ ವಿಧಾನ ಪರಿಷತ್‍ಗೆ ಆಯ್ಕೆಯಾಗಲು ಬೇಕಾದ 112 ಮತಗಳನ್ನು ಬಿಜೆಪಿ ಹೊಂದಿದೆ. ಸದ್ಯ ಬಿಜೆಪಿ 117 ಜತೆಗೆ ಒಬ್ಬ ಪಕ್ಷೇತರ ಶಾಸಕರ ಬೆಂಬಲವೂ ಇದೆ. ಕಾಂಗ್ರೆಸ್ 65, ಜೆಡಿಎಸ್ 35 ಶಾಸಕರು ಹೊಂದಿದೆ. ಹಾಗಾಗಿ ಬಿಜೆಪಿಗೇ ಈ ಸ್ಥಾನ ಒಲಿಯಲಿದೆ.

ಈ ಹಿಂದೆಯೇ ಈ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆಯ ದಿನ ನಿಗದಿಯಾಗಿತ್ತು. ಫೆ. 17ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿತ್ತು. 

ಬಿಜೆಪಿಗೆ ಅಗತ್ಯ ಸಂಖ್ಯೆಯ  ಶಾಸಕರಿದ್ದಾರೆ, ಆದರೇ ಕೊನೆ ಕ್ಷಣದಲ್ಲಿ ಜೆಡಿಎಸ್ ತಾನು ಕೂಡ ಅಭ್ಯರ್ಥಿ ಕಣಕ್ಕಿಳಿಸುವುದಾಗಿ ಘೋಷಿಸಿದೆ. ಆದರೆ ಅಭ್ಯರ್ಥಿ ಯಾರು ಎಂಬುದನ್ನು ಪ್ರಕಟಿಸಿಲ್ಲ,  ಆದರೆ ಕಾಂಗ್ರೆಸ್ ಜೆಡಿಎಸ್ ಗಿಂತ ಬಿಜೆಪಿ ಸಂಖ್ಯೆ ಹೆಚ್ಚಿರುವುದರಿಂದ ಲಕ್ಷ್ಮಣ ಸವದಿ ಆಯ್ಕೆ ಬಹುತೇಕ ಖಚಿತವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com