ಉಪಚುನಾವಣೆಯಲ್ಲಿ ಮತ್ತೆ ಗೆದ್ದವರನ್ನು ಅನರ್ಹ ಶಾಸಕರು ಎಂದ ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ಕಿಡಿ

ಉಪಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿದ್ದವರನ್ನು ಮತ್ತೆ ಅನರ್ಹ ಶಾಸಕರು ಎಂದು ಕರೆದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕರ ಆರ್. ಅಶೋಕ್ ಅವರು ತೀವ್ರವಾಗಿ ಕಿರಿಕಾರಿದ್ದಾರೆ. 
ಆರ್.ಅಶೋಕ್
ಆರ್.ಅಶೋಕ್

ಬೆಂಗಳೂರು: ಉಪಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿದ್ದವರನ್ನು ಮತ್ತೆ ಅನರ್ಹ ಶಾಸಕರು ಎಂದು ಕರೆದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕರ ಆರ್. ಅಶೋಕ್ ಅವರು ತೀವ್ರವಾಗಿ ಕಿರಿಕಾರಿದ್ದಾರೆ. 

ಸಂಪುಟಕ್ಕೆ ಸೇರ್ಪಡೆಗೊಂಡಿರುವ ಸಚಿವರನ್ನು ಸಿದ್ದರಾಮಯ್ಯ ಅವರು ಅರ್ಹರು ಎಂದು ಕರೆಯುವ ಮೂಲಕ ಟೀಕೆ ಮಾಡಿದ್ದಾರೆ. ಪಕ್ಷಾಂತರಗೊಂಡ ಬಳಿಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದರು. ಹೀಗಾಗಿ ಬೇರೊಬ್ಬರ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕು ಅವರಿಗಿಲ್ಲ ಎಂದು ಹೇಳಿದ್ದಾರೆ. 

ಭಾರೀ ಅಂತರಗಳಿಂದ ಸಚಿವರು ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2018ರಲ್ಲಿ ಸಿದ್ದರಾಮಯ್ಯ ಅವರು ಕೆಲವೇ ಅಂತರಗಳಲ್ಲಷ್ಟೇ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕರಾಗಿ ಮುಂದುವರೆಸದಿದ್ದರೆ, ಇನ್ನೆಷ್ಟು ದಿನ ಆ ಪಕ್ಷದಲ್ಲಿ ಮುಂದುವರೆಯುತ್ತಾರೆಂಬುದು ನಮಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. 

ಸಿದ್ದರಾಮಯ್ಯ ಅವರ ಈ ಹೇಳಿಕೆ ಸಚಿವ ಬಿಸಿ ಪಾಟೀಲ್ ಕೂಡ ಪ್ರತಿಕ್ರಿಯೆ ನೀಡಿದ್ದರು. ಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿತ್ತು. ಮತದಾರರ ಆಶೀರ್ವಾದ ಕೂಡ ನಮಗೆ ಸಿಕ್ಕಿದೆ. ಸಿದ್ದರಾಮಯ್ಯ ಅವರು ನಮ್ಮನ್ನು ಅನರ್ಹ ಶಾಸಕರೆಂದು ಕರೆಯಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ. 

ಇನ್ನು ಮಾಜಿ ಸಚಿಚವ ಎ.ಹೆಚ್ ವಿಶ್ವನಾಥ್ ಹಾಗೂ ಮಹೇಶ್ ಅವರೂ ಕೂಡ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಸಿದ್ದರಾಮಯ್ಯ ಅವರ ಹೇಳಿಕೆಯಿಂದ ಸಂವಿಧಾನಕ್ಕೆ ಅವಮಾನವಾಗಿದೆ. ಹೇಳಿಕೆಯಿಂದ ತಪ್ಪು ಸಂದೇಶವನ್ನು ರವಾನಿಸುತ್ತಿದ್ದಾರೆ. ಪಕ್ಷಾಂತರಗೊಂಡ ಪ್ರತೀಯೊಬ್ಬರಿಗೂ ಮತದಾರರು ಆಶೀರ್ವಾದ ಮಾಡಿದ್ದಾರೆ. ಸಿದ್ದರಾಮಯ್ಯ ಅವರೇನು ಲಂಚಕೊಟ್ಟು ಮತಪಡೆದಿದ್ದರೇ? ಎಂದು ವಿಶ್ವನಾಥ್ ಅವರು ಪ್ರಸ್ನಿಸಿದ್ದಾರೆ. 

ತಮ್ಮ ಹೇಳಿಕೆ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಚುನಾವಣೆಯನ್ನು ಇತ್ತೀಚಿನ ದಿನಗಳಲ್ಲಿ ಯಾವ ರೀತಿ ನಡೆಸಲಾಗುತ್ತಿದೆ ಎಂಬುದು ಜನರಿಗೂ ತಿಳಿದಿದೆ ಎಂದಿದ್ದಾರೆ. 

ಈ ನಡುವೆ ಕುಮಾರಸ್ವಾಮಿಯವರೂ ಕೂಡ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ಈ ಹಿಂದೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. 

14 ತಿಂಗಳುಗಳಲ್ಲಿ ಒತ್ತಡದಲ್ಲಿ ನಾನು ಕೆಲಸ ಮಾಡಿದ್ದೆ. ಮೈತ್ರಿ ಸರ್ಕಾರವನ್ನು ಟೀಕೆ ಮಾಡುವುದಕ್ಕೂ ಮುನ್ನ ಸಿದ್ದರಾಮಯ್ಯ ಒಮ್ಮೆ ಚಿಂತನೆ ನಡೆಸಲಿ. ಬಿಜೆಪಿ ಸರ್ಕಾರದ ಆಡಳಿತದಲ್ಲಿ ಅನಗತ್ಯವಾಗಿ ನಾನು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com