ಬೆಂಗಳೂರು ನಗರಾಭಿವೃದ್ಧಿ ಖಾತೆ ಯಾರಿಗೆ: ಆರಂಭವಾದ ಪೈಪೋಟಿ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ನಗರಾಭಿವೃದ್ಧಿ ಖಾತೆಗಾಗಿ ಭಾರೀ ಪೈಪೋಟಿ ಆರಂಭವಾಗಿದ್ದು, ಮೂಲ ವಲಸಿಗರ ನಡುವೆ ಜಟಾಪಟಿ ಆರಂಭವಾಗಿದೆ.
ಬಿಡಿಎ
ಬಿಡಿಎ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ನಗರಾಭಿವೃದ್ಧಿ ಖಾತೆಗಾಗಿ ಭಾರೀ ಪೈಪೋಟಿ ಆರಂಭವಾಗಿದ್ದು, ಮೂಲ ವಲಸಿಗರ ನಡುವೆ ಜಟಾಪಟಿ ಆರಂಭವಾಗಿದೆ.

ಬಹುಬೇಡಿಕೆಯ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಭಾರೀ ಒತ್ತಡ ಯಡಿಯೂರಪ್ಪ ಅವರ ಮೇಲಿದ್ದು, ಮೂಲ, ವಲಸೆ ಸೇರಿದಂತೆ, ನೂತನ ಸಚಿವರೂ ಕೂಡ ಬೆಂಗಳೂರು ನಗರಾಭಿವೃದ್ಧಿ ಖಾತೆಗಾಗಿ ಲಾಬಿ ನಡೆಸಿದ್ದಾರೆ.

ಆರು ತಿಂಗಳ ಹಿಂದೆ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಮಧ್ಯೆ ಖಾತೆಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಒತ್ತಡ ಹೆಚ್ಚಾಗುತ್ತಿದ್ದಂತೆಯೆ ಎಚ್ಚೆತ್ತುಕೊಂಡಿದ್ದ ಯಡಿಯೂರಪ್ಪ ಅವರು ಬೆಂಗಳೂರು ನಗರಾಭುವೃದ್ಧಿ ಖಾತೆಯನ್ನು ತಮ್ಮಲ್ಲಿಯೇ ಇಟ್ಟುಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com