ರಾಮನಗರದಲ್ಲಿ ಶಕ್ತಿ ಪ್ರದರ್ಶನ: ಬಿಜೆಪಿ, ಆರ್'ಎಸ್ಎಸ್ ವಿರುದ್ಧ ಡಿಕೆ.ಶಿವಕುಮಾರ್ ತೀವ್ರ ಕಿಡಿ

ಮಾಜಿ ಸಚಿವ ಡಿಕೆ.ಶಿವಕುಮಾರ್ ತವರು ಜಿಲ್ಲೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ತವರು ಕ್ಷೇತ್ರ ರಾಮನಗರದಲ್ಲಿ ಆರ್'ಎಸ್ಎಸ್ ತನ್ನ ಶಕ್ತಿ ಪ್ರದರ್ಶಿಸಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಆರ್'ಎಸ್ಎಸ್ ವಿರುದ್ಧ ಡಿಕೆ.ಶಿವಕುಮಾರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 
ಮಾಜಿ ಸಚಿವ ಡಿಕೆ.ಶಿವಕುಮಾರ್
ಮಾಜಿ ಸಚಿವ ಡಿಕೆ.ಶಿವಕುಮಾರ್

ಬೆಂಗಳೂರು: ಮಾಜಿ ಸಚಿವ ಡಿಕೆ.ಶಿವಕುಮಾರ್ ತವರು ಜಿಲ್ಲೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ತವರು ಕ್ಷೇತ್ರ ರಾಮನಗರದಲ್ಲಿ ಆರ್'ಎಸ್ಎಸ್ ತನ್ನ ಶಕ್ತಿ ಪ್ರದರ್ಶಿಸಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಆರ್'ಎಸ್ಎಸ್ ವಿರುದ್ಧ ಡಿಕೆ.ಶಿವಕುಮಾರ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕೂಡಲೇ ಅದರಿಂದ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಭರವಸೆಯನ್ನು ಕಳೆದುಕೊಳ್ಳಬಾರದು. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಉತ್ತಮವಾಗಿ ಕಾರ್ಯತಂತ್ರ ರೂಪಿಸಿದ್ದೇ ಆಗಿದ್ದರೆ, ಬಿಜೆಪಿ 10 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ನಮ್ಮ ತಪ್ಪನ್ನು ನಾವು ಸರಿಪಡಿಸಿಕೊಳ್ಳುತ್ತೇವೆಂದು ಹೇಳಿದ್ದಾರೆ. 

ಲೋಕಸಭಾ ಚುನಾನಣೆ ಬಳಿಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿತ್ತು. ಹಲವು ರಾಜ್ಯಗಳಲ್ಲಿ ತನ್ನ ಅಧಿಕಾರವನ್ನೇ ಕಳೆದುಕೊಂಡಿದೆ. ಸಿಎಎ ಹಾಗೂ ಎನ್ಆರ್'ಸಿ ವಿರುದ್ಧ ಜನರು ಬೀದಿಗಿಳಿದು ಸರ್ಕಾರದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಡಿಕೆ.ಸುರೇಶ್ ಅವರ ಕ್ಷೇತ್ರದಲ್ಲಿ ತಮ್ಮ ಅಸ್ತಿತ್ವ ಸಾಧಿಸಲು ಮುಂದಾಗುತ್ತಿದ್ದಾರೆ. ಅವರು ಎಷ್ಟು ಬೇಕಾದರೂ ಶಕ್ತಿ ಪ್ರದರ್ಶನ ಮಾಡಲಿ, ನಾವು ಅದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. 

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಏನು ಮಾಡಿತ್ತು ಎಂಬುದು ನಮಗೆಲ್ಲರಿಗೂ ಗೊತ್ತಿದೆ. ಬಿಜೆಪಿ ಪರ ಚುನಾವಣೆ ವೇಳೆ ವರದಿ ಮಾಡಲು ಮಾಧ್ಯಗಳು ಎಷ್ಟು ದುಡ್ಡು ಪಡೆದುಕೊಂಡಿದೆ ಎಂಬುದೂ ಗೊತ್ತಿದೆ. ಚುನಾವಣಾ ಆಯೋಗ ಏನು ಮಾಡುತ್ತಿದೆ? ತೆರಿಗೆ ಇಲಾಖೆ ಕಣ್ಮುಚ್ಚಿ ಕುಳಿತಿದೆಯೇ? ಹಾಸನ, ಶಿವಮೊಗ್ಗ ಹಾಗೂ ಮಂಡ್ಯ ಜಿಲ್ಲೆಗಳಲ್ಲೇ ಏಕೆ ದಾಳಿ ಮಾಡುತ್ತಿದ್ದಾರೆಂದು ಪ್ರಶ್ನಿಸಿದ್ದಾರೆ. 

ಕುಮಾರಸ್ವಾಮಿ, ಸಿದ್ದರಾಮಯ್ಯ, ಪರಮೇಶ್ವರ್ ಹಾಗೂ ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಇಲ್ಲಸಲ್ಲದ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com