ಕೆಪಿಸಿಸಿ ಅಧ್ಯಕ್ಷ ಸ್ಥಾನ: ಮಲ್ಲಿಕಾರ್ಜುನ ಖರ್ಗೆ ಹೆಸರು ಮುಂಚೂಣಿಗೆ 

ಅನೇಕ ತಿರುವುಗಳನ್ನು ಪಡೆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇದೀಗ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುಂಚೂಣಿಯಲ್ಲಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. 
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಅನೇಕ ತಿರುವುಗಳನ್ನು ಪಡೆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇದೀಗ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುಂಚೂಣಿಯಲ್ಲಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. 

ಕೆಲ ದಿನಗಳ ಹಿಂದೆ ಈ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹಾಗೂ ಎಂಬಿ ಪಾಟೀಲ್ ಹೆಸರು ಕೇಳಿಬಂದಿತ್ತು. ಆದರೆ, ಪಕ್ಷದ ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಎಲ್ಲಾ ನಾಯಕರನ್ನು ಜೊತೆಯಲ್ಲಿ ಕೊಂಡೊಯ್ಯುವ ನಾಯಕನಿಗಾಗಿ ಪಕ್ಷ ಹುಡುಕಾಟ ನಡೆಸುತ್ತಿದೆ. 

 ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಶಿವಸೇನಾ ನಡುವೆ ಒಮ್ಮತ ಮೂಡಿಸಿ ಮೈತ್ರಿ ಸರ್ಕಾರ ರಚಿಸುವಲ್ಲಿ ಪ್ರಮುಖ ಕಾರಣರಾದ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಲ ದಿನಗಳ ಕಾಲ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಲು ಹೈಕಮಾಂಡ್ ಚಿಂತನೆ ನಡೆಸಿದೆ ಎಂಬುದು ತಿಳಿದುಬಂದಿದೆ. 

ಡಿಕೆ ಶಿವಕುಮಾರ್ ಹಾಗೂ ಎಂಬಿ ಪಾಟೀಲ್ ಅವರಿಗಿಂತ ಮಲ್ಲಿಕಾರ್ಜುನ ಖರ್ಗೆ ಹೆಚ್ಚಿನ ಅನುಭವ  ಹೊಂದಿದ್ದಾರೆ. ಒಂದು ವೇಳೆ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದರೆ ಅವರ ವಿರುದ್ಧ ಸಿದ್ದರಾಮಯ್ಯ, ಎಂಬಿ ಪಾಟೀಲ್ ಕೂಡಾ ಧ್ವನಿ ಎತ್ತುವುದಿಲ್ಲ ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. 

ಖರ್ಗೆ 2008ರಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಲುವ ಮುನ್ನ ಅವರು 11 ಬಾರಿ ಚುನಾವಣೆಯಲ್ಲಿ ಗೆದ್ದಿದ್ದಾರೆ. ಡಿಕೆ ಶಿವಕುಮಾರ್ ಎಲ್ಲಾ ಕೇಸ್ ಗಳಿಂದ ಮುಕ್ತವಾಗಿ ಬರುವವರೆಗೂ ಡಿಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ಪರಿಗಣಿಸುವುದಿಲ್ಲ ಎಂಬುದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com