ಬಕ ಪಕ್ಷಿಗಳಂತೆ ಕಾಯುತ್ತಿದ್ದ ಸಚಿವರಿಗಿಂದು ಖಾತೆ ಹಂಚಿಕೆ

ಉಪಚುನಾವಣೆ ಗೆಲುವಿನ ಬಳಿಕ ಸಾಕಷ್ಟು ದಿನಗಳ ಬಳಿಕ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದ ನೂತನ 10 ಸಚಿವರಿಗೆ ಸೋಮವಾಕ ಖಾತೆ ಹಂಚಲಾಗುತ್ತದೆ ಎಂದು ತಿಳಿದುಬಂದಿದೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಉಪಚುನಾವಣೆ ಗೆಲುವಿನ ಬಳಿಕ ಸಾಕಷ್ಟು ದಿನಗಳ ಬಳಿಕ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದ ನೂತನ 10 ಸಚಿವರಿಗೆ ಸೋಮವಾಕ ಖಾತೆ ಹಂಚಲಾಗುತ್ತದೆ ಎಂದು ತಿಳಿದುಬಂದಿದೆ. 

ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಸ್ಪಷ್ಟನೆ ನೀಡಿದ್ದಾರೆ. ಆದರೆ, ಯಾರಿಗೆ ಯಾವ ಖಾತೆ ಎಂಬ ಗುಟ್ಟನ್ನು ಮಾತ್ರ ಬಿಟ್ಟುಕೊಟ್ಟಿಲ್ಲ. ಏತನ್ಮಧ್ಯೆ ನಿಗಮ ಮಂಡಲಿಗಳಿಗೆ ಬಜೆಟ್ ನಂತರ ನೇಮಕ ನಡೆಯುತ್ತದೆ ಎಂದು ಹೇಳಿದ್ದಾರೆ. 

ಹೊಸ 10 ಸಚಿವರಿಗೆ ಯಾವ ಯಾವ ಖಾತೆ ನೀಡಬೇಕೆಂದು ಈಗಾಗಲೇ ತೀರ್ಮಾನಿಸಲಾಗಿದೆ. ಶನಿವಾರ ಮತ್ತು ಭಾನುವಾರ ರಜೆಯ ಕಾರಣ ಖಾತೆ ಹಂಚಿಕೆ ಸಾಧ್ಯವಾಗಲಿಲ್ಲ. ಹೀಗಾಗಿ ಸೋಮವಾರ ಹಂಚಿಕೆ ಮಾಡಲಾಗುವುದು. ಈ ವಿಚಾರವಾಗಿ ಯಾವುದೇ ಗೊಂದಲಗಳಿಲ್ಲ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಉತ್ತರ ಕರ್ನಾಟಕ ಭಾಗದ ಹಿರಿಯ ಬಿಜೆಪಿ ಮುಖಂಡ ಉಮೇಶ್ ಕತ್ತಿಯವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಬಗ್ಗೆ ಮಾತನಾಡಿದ ಅವರು, ಉಮೇಶ್ ಕತ್ತಿ ದೆಹಲಿಯಲ್ಲಿ ಹೈಕಮಾಂಡ್ ಮುಖಂಡನ್ನು ಭೇಟಿ  ಮಾಡಿ ನಮ್ಮ ಮನೆಗೆ ಆಗಮಿಸಿ ನನ್ನ ಬಳಿ ಮಾತನಾಡಿದ್ದಾರೆ. ಅವರು ಇದೇ ವೇಳೆ ಸಚಿವರಾಗಬೇಕಾಗಿತ್ತು. ಅನಿವಾರ್ಯ ಕಾರಣದಿಂದ ಅವರಿಗೆ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ನೀಡಲಾಗುವುದು. ಉತ್ತರ ಕರ್ನಾಟಕ ಭಾಗದ ಪಕ್ಷದ ಮುಖಂಡರಾದ ಅವರನ್ನು ಸಚಿವರಾಗಿಸಲಾಗುವುದು ಎಂದಿದ್ದಾರೆ. 

ಆರಗ ಜ್ಞಾನೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಮಾತನಾಡಿ, ಹಲವರಿಗೆ ಸಚಿವರಾಗುವ ಅಪೇಕ್ಷೆ ಇದೆ. ಹೊರಗಿನಿಂದ ಬಂದವರಿಗೆ ಸಚಿವ ಸ್ಥಾನ ಕಲ್ಪಿಸಬೇಕಾಗಿದ್ದರಿಂದ ಅವಕಾಶವಿಲ್ಲವಾಗಿದೆ. ಅನಿವಾರ್ಯ ಕಾರಣದಿಂದ ಈ ಬಾರಿ ಅಸಾಧ್ಯ. ಅವರಿಗೆ ಬೇರೆ ಜವಾಬ್ದಾರಿ ವಹಿಸಲಾಗುವುದು ಎಂದು ಹೇಳಿದ್ದಾರೆ. 

ಬಳಿಕ ಮಾತನಾಡಿದ ವಿಜಯೇಂದ್ರ ಅವರು, ಅಡಗೂರು ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ಅವರಿಗೆ ಮುಂದಿನ ದಿನಗಳಲ್ಲಿ ಸಂಪುಟದಲ್ಲಿ ಅವಕಾಶ ನೀಡಲಾಗುತ್ತದೆ. ಮುಖ್ಯಮಂತ್ರಿಗಳು ಅವರು ನೀಡಿದ್ದ ಮಾತಿಗೆ ಎಂದಿಗೂ ತಪ್ಪುವುದಿಲ್ಲ. ಅವರನ್ನು ಮಾತನ್ನು ಉಳಿಸಿಕೊಳ್ಳುತ್ತಾರೆಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com