ಸಿಎಂ ಯಡಿಯೂರಪ್ಪ 6 ತಿಂಗಳು 16 ಇಲಾಖೆಗಳನ್ನು ಇಟ್ಟುಕೊಂಡು ಹೇಗೆ ಕೆಲಸ ಮಾಡುತ್ತಾರೆ: ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಖಜಾನೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಿದೆ. ಕೇಂದ್ರದಿಂದ ಜಿಎಸ್ ಟಿ ಪರಿಹಾರ ಧನ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಗೆ ಸರಿಯಾಗಿ ಹಣ ಬಂದಿಲ್ಲ. ಸರಿಯಾಗಿ ಜನಪರ ಕೆಲಸಗಳು ಬಿಜೆಪಿ ಸರ್ಕಾರದಡಿ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಕಚೇರಿಯಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಕಚೇರಿಯಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಿದೆ. ಕೇಂದ್ರದಿಂದ ಜಿಎಸ್ ಟಿ ಪರಿಹಾರ ಧನ ಸೇರಿದಂತೆ ಅಭಿವೃದ್ಧಿ ಕಾರ್ಯಗಳಿಗೆ ಸರಿಯಾಗಿ ಹಣ ಬಂದಿಲ್ಲ. ಸರಿಯಾಗಿ ಜನಪರ ಕೆಲಸಗಳು ಬಿಜೆಪಿ ಸರ್ಕಾರದಡಿ ಆಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.


ಬೆಂಗಳೂರಿನ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಕಚೇರಿಗೆ ಆಗಮಿಸಿದ್ದ ಅವರು ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಜಿಎಸ್ ಟಿ ಅನುದಾನ, ನರೇಗ ಯೋಜನೆಯಡಿ ಕೇಂದ್ರದಿಂದ ಬರಬೇಕಾದ ಹಣ ಬಂದಿಲ್ಲ, ನಮ್ಮ ರಾಜ್ಯದಲ್ಲಿ ಕೂಡ ತೆರಿಗೆ ಸಂಗ್ರಹ ಸರಿಯಾಗಿ ಆಗುತ್ತಿಲ್ಲ, ಇದರಿಂದ ಸರ್ಕಾರಕ್ಕೆ ಬಜೆಟ್ ನಲ್ಲಿ ನೀಡಿದ ಭರವಸೆಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ, ಕಳೆದ 6 ತಿಂಗಳಿನಿಂದ ರಾಜ್ಯ ಸರ್ಕಾರದಲ್ಲಿ ಅಭಿವೃದ್ದಿ ಕಾರ್ಯಗಳು ಆಗುತ್ತಿಲ್ಲ. ಸರ್ಕಾರದ ಇಲಾಖೆಗಳಿಗೆ ನ್ಯಾಯ ಒದಗಿಸಲು ಆಗುತ್ತಿಲ್ಲ ಎಂದರು.


ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲಿ ಬೆಂಗಳೂರು ನಗರದ ಚಿತ್ರಣ ಬದಲು ಮಾಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು. ಆದರೆ ಅವರು ಅಧಿಕಾರಕ್ಕೆ ಬಂದು 7 ತಿಂಗಳಾಗುತ್ತಾ ಬಂದಿದೆ. ಬೆಂಗಳೂರಿನ ಚಿತ್ರಣ ಏನು ಬದಲಾಗಿದೆ, ಇನ್ನಷ್ಟು ಹದಗೆಟ್ಟು ಹೋಗಿದೆ ಎಂದು ಆರೋಪಿಸಿದರು.


ಹಣಕಾಸು, ಬೆಂಗಳೂರು ಅಭಿವೃದ್ಧಿ ಸೇರಿದಂತೆ ಹಲವು ಇಲಾಖೆಗಳನ್ನು ಸಿಎಂ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಒಬ್ಬರಿಂದ ಒಂದು ಇಲಾಖೆಯನ್ನು ನಿರ್ವಹಿಸುವುದೇ ಕಷ್ಟವಿರುವಾಗ ಹಲವು ಇಲಾಖೆಗಳನ್ನು ಇವರು ಹೇಗೆ ನಿಭಾಯಿಸುತ್ತಾರೆ. ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಪರವಾಗಿ ಕೆಲಸ ಮಾಡುತ್ತಿಲ್ಲ, ಬಿಜೆಪಿ ಸರ್ಕಾರ ಬರಲು ಆಪರೇಷನ್ ಕಮಲ ಮೂಲಕ ಸಾಕಷ್ಟು ಹಣ ವ್ಯಯಿಸಿದ್ದಾರೆ. ಅದಕ್ಕೆಲ್ಲಾ ಎಲ್ಲಿಂದ ಹಣ ಬಂತು, ಕಪ್ಪು ಹಣ ಬಳಕೆಯಲ್ಲವೇ, ಇಂತಹ ಸರ್ಕಾರದಿಂದ ಉತ್ತಮ ಆಡಳಿತವನ್ನು ಈ ರಾಜ್ಯದ ಜನತೆ ನಿರೀಕ್ಷಿಸಲು ಸಾಧ್ಯವೇ ಎಂದು ಕೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com