ವಿಧಾನಸಭೆ ಅಧಿವೇಶನಕ್ಕೂ ಮುನ್ನವೇ ಕೆಪಿಸಿಸಿ ಅಧ್ಯಕ್ಷರ ನೇಮಕ

ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನವೇ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ನಡೆಯುತ್ತದೆ ಎಂದು ಕಾಂಗ್ರೆಸ್ ನಾಯಕರು ಭರವಸೆ ವ್ಯಕ್ತ ಪಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು:  ವಿಧಾನಸಭೆ ಅಧಿವೇಶನ ಆರಂಭಕ್ಕೂ ಮುನ್ನವೇ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ನಡೆಯುತ್ತದೆ ಎಂದು ಕಾಂಗ್ರೆಸ್ ನಾಯಕರು ಭರವಸೆ ವ್ಯಕ್ತ ಪಡಿಸಿದ್ದಾರೆ.

ಇದೇ ವೇಳೆ ಇನ್ನೂ ಒಂದು ಎರಡು ದಿನದಲ್ಲಿ ವಿರೋಧ ಪಕ್ಷದ ನಾಯಕರ ಬಗ್ಗೆಯೂ ಸ್ಪಷ್ಟನೆ ಸಿಗಲಿದೆ. ಫೆಬ್ರವರಿ 17 ರಿಂದ ಅಧಿವೇಶನ ಆರಂಭವಾಗಲಿದೆ. ಉನ್ನತ ಹುದ್ದೆಗಳನ್ನು ಭರ್ತಿ ಮಾಡಿದ ನಂತರ ಆಡಳಿತಾರೂಢ ಬಿಜೆಪಿ  ವಿರುದ್ಧ ಹೋರಾಡಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ,

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಹೆಸರು ಅಂತಿಮವಾಗಿದೆ ಎಂದು ಹೇಳಲಾಗಿದೆ. ಜೊತೆಗೆ ಸಿದ್ದರಾಮಯ್ಯ ಅವರೇ ವಿರೋಧ ಪಕ್ಷದ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ದೆಹಲಿ ಚುನಾವಣೆ ಮುಗಿದಿದ್ದು ಶೀಘ್ರವೇ  ನೇಮಕಾತಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ದೆಹಲಿ ವಿಧಾನಸಭಾ ಚುನಾವಣೆಯ ಗೆಲುವಿಗಾಗಿ ಕಾಂಗ್ರೆಸ್ ಪಕ್ಷ ತನ್ನ ಎಲ್ಲ ಪ್ರಯತ್ನ ಮಾಡಿತಾದರೂ ಅದಕ್ಕೆ ಯಶಸ್ಸು ಸಿಗಲಿಲ್ಲ ಎಂದು ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಮೀಸಲಾತಿ ಬಗ್ಗೆ ಟಿಪ್ಪಣಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಸುಪ್ರೀಂ ಕೋರ್ಟ್ ನಿರ್ಧಾರ ತಪ್ಪು ಇದೆ ಎಂದು ಹೇಳಿದ್ದೇನೆ. ಮೂಲಭೂತವಾಗಿ ಮೀಸಲಾತಿ ಸಂವಿಧಾನದಲ್ಲಿ ಇರುವ ಹಕ್ಕು. ಟಿಪ್ಪಣ್ಣಿಯನ್ನು ನಾನು ಖಂಡಿಸುತ್ತೇನೆ ಎಂದರು.

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕ ಆಗಲಿದೆ. ಸಾಂಗ್ಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಲಿದ್ದೇನೆ. ಎನ್ ಸಿ ಪಿ ನಾಯಕ್ ಶರದ್ ಪವಾರ್ ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com