ಸೋಲಿನ ನಡುವೆಯೂ ಕಾಂಗ್ರೆಸ್ ಎಚ್ಚೆತ್ತುಕೊಳ್ಳದೇ ಇರುವುದು ಆತಂಕಕಾರಿ: ಎನ್‌.ಎ.ಹ್ಯಾರಿಸ್ 

ನಾನೊಬ್ಬ ಕಟ್ಟಾ ಕಾಂಗ್ರೆಸ್ಸಿಗ. ಆದರೆ ಕಾಂಗ್ರೆಸ್ ಪಕ್ಷ ಹಲವಾರು ಸೋಲುಗಳ ನಡುವೆಯೂ ಎಚ್ಚೆತ್ತುಕೊಳ್ಳದೇ ಇರುವುದು ನಿಜಕ್ಕೂ ಆತಂಕಕಾರಿ. 
ಹ್ಯಾರಿಸ್
ಹ್ಯಾರಿಸ್

ಬೆಂಗಳೂರು: ನಾನೊಬ್ಬ ಕಟ್ಟಾ ಕಾಂಗ್ರೆಸ್ಸಿಗ. ಆದರೆ ಕಾಂಗ್ರೆಸ್ ಪಕ್ಷ ಹಲವಾರು ಸೋಲುಗಳ ನಡುವೆಯೂ ಎಚ್ಚೆತ್ತುಕೊಳ್ಳದೇ ಇರುವುದು ನಿಜಕ್ಕೂ ಆತಂಕಕಾರಿ. 

ಪಕ್ಷದಲ್ಲಿ ಪದಾಧಿಕಾರಿಗಳು ಇರುವುದು ಯಾವ ಕೆಲಸಕ್ಕಾಗಿ ಪಕ್ಷವನ್ನು ಕಟ್ಟುವುದಕ್ಕಾಗಿಯೊ? ಅಥವಾ ತಮ್ಮ ಸ್ವ ಹಿತಾಸಕ್ತಿಗಳಿಗಾಗಿ ಪಕ್ಷವನ್ನು ಬಲಿ ಕೊಡುವುದಕ್ಕಾಗಿಯೊ? ಎಂದು ಕಾಂಗ್ರೆಸ್ ಶಾಸಕ ಎನ್‌.ಎ.ಹ್ಯಾರೀಸ್ ಕಟುವಾಗಿ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ದೆಹಲಿಯಂತಹ ಫಲಿತಾಂಶ ಹಲವಾರು ಬಾರಿ ಬಂದಿದೆ. ಆದರೂ ಈ ಬಗ್ಗೆ ಪಕ್ಷ ಯೋಚನೆ ಮಾಡದೇ ಇರುವುದು ತನ್ನ ತಪ್ಪುಗಳನ್ನು ತಿದ್ದಿಕೊಳ್ಳದೆ ಇರುವುದು ಯೋಚಿಸಬೇಕಾದ ವಿಚಾರ. 

ದೇಶಕ್ಕೆ ಕಾಂಗ್ರೆಸ್ ಪಕ್ಷದ ಅನಿವಾರ್ಯತೆ ಇದೆ. ಆದರೆ ಕಾಂಗ್ರೆಸ್ ಪಕ್ಷ ಈ ಬಗ್ಗೆ ಚಿಂತಿಸುತ್ತಿಲ್ಲ. ಸೋಲುಗಳು ಪಾಠವಾಗಬೇಕು ಅಭ್ಯಾಸವಾಗಬಾರದು.

ದೆಹಲಿಯ ಫಲಿತಾಂಶ ಪಕ್ಷದ ಹಿರಿಯ ನಾಯಕರಿಗೆ ಸಂದೇಶವಾಗಬೇಕು ಎಂಬುದು ನನ್ನ ಆಗ್ರಹ ಎಂದು ಹ್ಯಾರೀಸ್ ಟ್ವಿಟ್ ಮಾಡಿ, ಪಕ್ಷದ ಹಿರಿಯ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com