'ಯಡಿಯೂರಪ್ಪ ಕಾಲ್ಗುಣದಿಂದ ರಾಜ್ಯದಲ್ಲಿ ಸಮೃದ್ಧ ಮಳೆ, ಬೆಳೆ'

ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಲವು ಸವಾಲುಗಳು ಎದುರಾದರೂ ಎಲ್ಲವನ್ನೂ ಮುಖ್ಯಮಂತ್ರಿ ಯಶಸ್ವಿಯಾಗಿ ಎದುರಿಸಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಹೇಳಿದ್ದಾರೆ.
ಯಡಿಯೂರಪ್ಪ
ಯಡಿಯೂರಪ್ಪ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಲವು ಸವಾಲುಗಳು ಎದುರಾದರೂ ಎಲ್ಲವನ್ನೂ ಮುಖ್ಯಮಂತ್ರಿ ಯಶಸ್ವಿಯಾಗಿ ಎದುರಿಸಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಹೇಳಿದ್ದಾರೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಕಾಲ್ಗುಣದಿಂದ ಹೈದರಾಬಾದ್ ಕರ್ನಾಟಕದಲ್ಲಿ ವಿಮಾನ ಹಾರಾಟ ಶುರುವಾಗಿದೆ. ಅವರ ಕಾಲ್ಗುಣದಿಂದ ರಾಜ್ಯದಲ್ಲಿ ಮಳೆ ಬೆಳೆ ಚೆನ್ನಾಗಿ ಆಗುತ್ತಿದೆ ಎಂದು ಯಡಿಯೂರಪ್ಪ ಅವರ ಗುಣಗಾನ ಮಾಡಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 41 ಲಕ್ಷ ರೈತ ಕುಟುಂಬಗಳಿಗೆ 825 ಕೋಟಿ ರೂ.ಬಿಡುಗಡೆ ಮಾಡಲಾಗಿದೆ. 9 ಲಕ್ಷ ಹಾಲು ಉತ್ಪಾದಿಸುವ ರೈತ ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ 5 ರೂ.ಪ್ರೋತ್ಸಾಹ ಧನದಂತೆ 691 ಕೋಟಿ ರೂ. ಅವರ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದರು.

ಯಡಿಯೂರಪ್ಪ ಮುಖ್ಯಮಂತ್ರಿಯಾದ ಕೆಲವೇ ದಿನಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಯಿತು. ಎಲ್ಲ ಪ್ರದೇಶಗಳಿಗೆ ಎರಡೆರಡುಬಾರಿ ಭೇಟಿ ನೀಡಿ ಜನರ ಸಂಕಷ್ಟಗಳಿಗೆ ಸ್ಪಂದಿಸಿದ್ದರು ಎಂದರು. 2018ರ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಾಗ ತಾತ್ಕಾಲಿಕವಾಗಿ ಸಾಂದರ್ಭಿಕ ಶಿಶುವೊಂದು ಜನಿಸಿತ್ತು. ಆದರೆ ಕಾಲಾನಂತರ ಜನ ಅದನ್ನು ತಿರಸ್ಕರಿಸಿದರು ಎಂದು ನಡಹಳ್ಳಿ ಹೇಳುತ್ತಿದ್ದಂತೆ, ಜೆಡಿಎಸ್ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com