ದುಡ್ಡಿಲ್ಲ ಕಾಸಿಲ್ಲ, ಹೆಸರು ಮಾತ್ರ ಸಂಪತ್ತಯ್ಯಂಗಾರ್: ರಾಜ್ಯ ಸರ್ಕಾರದ ಹಣಕಾಸಿನ ಸ್ಥಿತಿ ಕುರಿತು ಇಬ್ರಾಹಿಂ ವ್ಯಂಗ್ಯ

ದುಡ್ಡಿಲ್ಲ ಕಾಸಿಲ್ಲ, ಹೆಸರು ಮಾತ್ರ ಸಂಪತ್ತಯ್ಯಂಗಾರ್ ಎಂಬಂತೆ ರಾಜ್ಯ ಸರ್ಕಾರದ ಹಣಕಾಸಿನ ಸ್ಥಿತಿಯಾಗಿದೆ. ರಾಜ್ಯಪಾಲರ ಭಾಷಣ ಖುಷಿ ಕೊಡುತ್ತದೆ. ಆದರೆ, ವಾಸ್ತವದಿಂದ ಕೂಡಿಲ್ಲ ಎಂದು ಕಾಂಗ್ರೆಸ್ ಸದಸ್ಯ ಸಿ.ಎಂ.ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. 
ಇಬ್ರಾಹಿಂ
ಇಬ್ರಾಹಿಂ

ವಿಧಾನಪರಿಷತ್: ದುಡ್ಡಿಲ್ಲ ಕಾಸಿಲ್ಲ, ಹೆಸರು ಮಾತ್ರ ಸಂಪತ್ತಯ್ಯಂಗಾರ್ ಎಂಬಂತೆ ರಾಜ್ಯ ಸರ್ಕಾರದ ಹಣಕಾಸಿನ ಸ್ಥಿತಿಯಾಗಿದೆ. ರಾಜ್ಯಪಾಲರ ಭಾಷಣ ಖುಷಿ ಕೊಡುತ್ತದೆ. ಆದರೆ, ವಾಸ್ತವದಿಂದ ಕೂಡಿಲ್ಲ ಎಂದು ಕಾಂಗ್ರೆಸ್ ಸದಸ್ಯ ಸಿ.ಎಂ.ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. 

ರಾಜ್ಯಪಾಲರ ಭಾಷಣದ ಮೇಲೆ ಮಾತನಾಡಿದ ಅವರು, ಪ್ರವಾಹದಿಂದ ಮೂರು ಲಕ್ಷ ಮನೆ ಬಿದ್ದಿದೆ ಎಂದು ಹೇಳುತ್ತೀರಿ. ಈ ಪೈಕಿ ಎಷ್ಟು ಮನೆ ಕಟ್ಟಿದ್ದೀರಿ? ಸಂತ್ರಸ್ತರು ಈಗಲೂ ಕಣ್ಣೀರಿಡುತ್ತಿದ್ದಾರೆ. ನಿಮ್ಮ ಹತ್ತಿರ ದುಡ್ಡಿಲ್ಲ. ಬಿದ್ದ ಮನೆಗಳ ಸಮೀಕ್ಷೆಯನ್ನೇ ಮಾಡಿಲ್ಲ. ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಎಷ್ಟು ತೆರಿಗೆ ಸಂಗ್ರಹವಾಗಿದೆ. ಎಷ್ಟು ವೆಚ್ಚವಾಗಿದೆ? ಕೇಂದ್ರದಿಂದ ಜಿಎಸ್'ಟಿ ಅಡಿ ಬರಬೇಕಾದ ಪರಿಹಾರದ ಮೊತ್ತವೆಷ್ಟು? ನರೇಗಾ ಯೋಜನೆಯಡಿ ಎಷ್ಟು ಹಣ ಬಿಡುಗಡೆಯಾಗಿದೆ ಎಂಬ ವಿವರಗಳ ಶ್ವೇತಪತ್ರವನ್ನು ಮಂಡಿಸಬೇಕೆಂದು ಆಗ್ರಹಿಸಿದರು. 

ಸಿಎಎ, ಎನ್ಆರ್'ಸಿ ಕಾಯ್ದೆ ಹಿನ್ನಲೆಯಲ್ಲಿ ಹಾಸ್ಯ ಮಿಶ್ರಿತ ಮೊನಚು ಮಾತಿನತತಿಂದಲೇ ಮಾತನಾಡಿದ ಇಬ್ರಾಹಿಂ, ಬೇರೆ ಕಡೆ ಹಿಂದು-ಮುಸ್ಲಿಂ ಹೆಸರಿನಲ್ಲಿ ಚುನಾವಣೆ ನಡೆಯಬಹುದು. ಆದರೆ, ಕರ್ನಾಟಕ ಸೂಫಿ, ಸಂತರ ನಾಡು, ಇಲ್ಲಿ ಎಂದು ಕೂಡ ಹಿಂದು, ಮುಸ್ಲಿಂ ಹೆಸರಿನಲ್ಲಿ ಚುನಾವಣೆ ನಡೆಯುವುದಿಲ್ಲ. ಇಲ್ಲಿ ಲಿಂಗಾಯತ, ಒಕ್ಕಲಿಗ, ಕುರುಬ, ಹಿಂದುಳಿದ ವರ್ಗ ಮುಂತಾದ ಜಾತಿಗಳ ಹೆಸರಿನಲ್ಲಿ ಚುನಾವಣೆ ನಡೆಯುತ್ತದೆ ಎಂದು ತಿಳಿಸಿದರು. 

ಮಂಗಳೂರಿನಲ್ಲಿ ಯಡಿಯೂರಪ್ಪ ಸರ್ಕಾರವಿಲ್ಲ. ಬೆಂಗಳೂರು ಅಥವಾ ಕಲಬುರಗಿಯಲ್ಲಿ ಜನರು ಸೇರಿದಾಗ ಯಾವುದೇ ಅಹಿತಕರ ಘಟನೆಗಳಾಗಿರಲಿಲ್ಲ. ಮಂಗಳೂರಿನಲ್ಲೇ ಏಕೆ ನಡೆಯುತ್ತದೆ? ಯಡಿಯೂರಪ್ಪ ಅವರ ರಾಜಕೀಯ ಭವಿಷ್ಯವನ್ನು ಅಂತ್ಯಗೊಳಿಸಲು ಬಿಜೆಪಿಯಲ್ಲಿಯೇ ಇರುವ ಕೆಲವರು ಪಿತೂರಿ ನಡೆಸುತ್ತಿದ್ದಾರೆಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com