ವಿಧಾನಸಭೆ: ಮಾ. 2ರಂದು ಸಿಎಂ ಯಡಿಯೂರಪ್ಪರಿಂದ ಉತ್ತರ- ಸ್ಪೀಕರ್ ಘೋಷಣೆ

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂಬ ವಿಪಕ್ಷಗಳ ಒತ್ತಡಕ್ಕೆ ಮಣಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾ. 2ರಂದು ಉತ್ತರ ನೀಡಲಿದ್ದಾರೆ ಎಂದು ಪ್ರಕಟಿಸಿದ್ದಾರೆ. 
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು: ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂಬ ವಿಪಕ್ಷಗಳ ಒತ್ತಡಕ್ಕೆ ಮಣಿದ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾ. 2ರಂದು ಉತ್ತರ ನೀಡಲಿದ್ದಾರೆ ಎಂದು ಪ್ರಕಟಿಸಿದ್ದಾರೆ.

ನಿಗದಿಯಂತೆ ಗುರುವಾರ ಮಧ್ಯಾಹ್ನ 4 ಗಂಟೆಗೆ ಮುಖ್ಯಮಂತ್ರಿಗಳು ಉತ್ತರ ನೀಡಬೇಕಿತ್ತು. ಆದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ತಮಗೆ ಮಾತನಾಡಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ, ರಾಜ್ಯಪಾಲರ ಭಾಷಣದಲ್ಲಿ ಅನೇಕ ವಿಷಯಗಳನ್ನು ಉಲ್ಲೇಖಿಸಲಾಗಿದ್ದು, ಆ ಕುರಿತು ವಿಸ್ತೃತ ಚರ್ಚೆ ನಡೆಯಬೇಕು. ಅದಕ್ಕಾಗಿ ಸದನವನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದ್ದರು. 

ಇದಕ್ಕೆ ಸ್ಪಂದಿಸಿದ ಸ್ಪೀಕರ್ ಈ ಕುರಿತು ಆಡಳಿತ ಪಕ್ಷದ ಸದಸ್ಯರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಅದರಂತೆ, ಗುರುವಾರ ಇಡೀ ದಿನ ಚರ್ಚೆಗೆ ಅವಕಾಶ ಕಲ್ಪಿಸಿ, ಮುಖ್ಯಮಂತ್ರಿಗಳು ಮಾರ್ಚ್ 2ರಂದು ಉತ್ತರ ನೀಡಲು ಅವಕಾಶ ಕಲ್ಪಿಸಿದ್ದಾರೆ. 

ಇದಕ್ಕಾಗಿ ಮಾರ್ಚ್ 2ರಿಂದ 4ರವರೆಗೆ ನಿಗದಿಯಾಗಿದ್ದ ಸಂವಿಧಾನದ ಕುರಿತು ಚರ್ಚೆಯನ್ನು ಎರಡು ದಿನಕ್ಕೆ ಮೊಟಕುಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com