ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತು ಶೀಘ್ರ ನಿರ್ಧಾರ: ಸೋನಿಯಾ ಭೇಟಿ ಬಳಿಕ ದಿನೇಶ್ ಗುಂಡೂರಾವ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ನೂತನ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದ್ದಾರೆ.
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

ನವದೆಹಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ನೂತನ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಅವರು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು ಗುರುವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಸೋನಿಯಾ ಗಾಂಧಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗುಂಡೂರಾವ್ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಸುಮಾರು ಎರಡು ತಿಂಗಳಾಗಿದೆ. ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ಸಾಕಷ್ಟು ಗೊಂದಲ ಇದೆ. ಇನ್ನು ವಿಳಂಬ ಮಾಡಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ನೇಮಕಕ್ಕೆ ಸಂಬಂಧಿಸಿದಂತೆ ಶೀಘ್ರ ನಿರ್ಧಾರ ತೆಗೆದುಕೊಳ್ಳುವುದಾಗಿ ಸೋನಿಯಾ ಭರವಸೆ ನೀಡಿದ್ದಾರೆ ಎಂದರು.

ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಅವರು ಸೋಲಿನ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದ್ದರು. ದಿನೇಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇದುವರೆಗೂ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲು ಕಾಂಗ್ರೆಸ್‌ನಿಂದ ಸಾಧ್ಯವಾಗಲಿಲ್ಲ. ಡಿಕೆ ಶಿವಕುಮಾರ್ ಅವರಿಗೆ ಕೆಪಿಸಿಸಿ ಪಟ್ಟ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದ್ದರೂ ಇದಕ್ಕೆ ಸಿದ್ದರಾಮಯ್ಯ ಬಣ ವಿರೋಧ ವ್ಯಕ್ತಪಡಿಸುತ್ತಿದೆ. ಪರಿಣಾಮ ಅಧ್ಯಕ್ಷರ ಆಯ್ಕೆ ವಿಚಾರ ಕಗ್ಗಂಟಾಗಿ ಉಳಿದಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com