ಇನ್ನೂ 3.5 ವರ್ಷ ರಾಜ್ಯದಲ್ಲಿ ಬಿಎಸ್'ವೈ ಸರ್ಕಾರವೇ ಇರಲಿ: ಹೆಚ್.ಡಿ.ದೇವೇಗೌಡ

ಮತ್ತೆ ಚುನಾವಣೆ ಬಂದರೆ ಜನರಿಗೆ ತೊಂದರೆಯಾಗುವುದರಿಂದ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮೂರೂವರೆ ವರ್ಷ ಆಡಳಿತ ನಡೆಸಲಿ ಎಂಬುದು ನನ್ನ ಆಶಯವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ. 
ಹೆಚ್.ಡಿ.ದೇವೇಗೌಡ
ಹೆಚ್.ಡಿ.ದೇವೇಗೌಡ

ಬೆಳಗಾವಿ: ಮತ್ತೆ ಚುನಾವಣೆ ಬಂದರೆ ಜನರಿಗೆ ತೊಂದರೆಯಾಗುವುದರಿಂದ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮೂರೂವರೆ ವರ್ಷ ಆಡಳಿತ ನಡೆಸಲಿ ಎಂಬುದು ನನ್ನ ಆಶಯವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 2023ರ ಮೇನಲ್ಲಿ ಜನತೆ ಮುಂದೆ ಹೋಗೋಣ ಎಂದು ಬಯಸಿದ್ದೇನೆ. ಬಿಜೆಪಿ ಶಿಸ್ತುಬದ್ಧ ಪಕ್ಷ. ಅವರು ಒಳ್ಳೆಯ ಕೆಲಸ ಮಾಡಲಿ. ಮತ್ತೆ ಚುನಾವಣೆ ಬಂದರೆ ಜನರಿಗೆ ತೊಂದರೆಯಾಗುತ್ತದೆ. ಅದ್ದರಿಂದ ಯಡಿಯೂರಪ್ಪ ಸರ್ಕಾರ ಸುಭದ್ರವಾಗಿ ನಡೆಯಲಿ. ಆಡಳಿತಾರೂಢ ಬಿಜೆಪಿ ಪಕ್ಷವನ್ನು ಪತನಗೊಳಿಸುವ ಬಗ್ಗೆ ಹೆಚ್ಚು ಚರ್ಚಿಸುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಯಡಿಯೂರಪ್ಪ ಅವರನ್ನು ಲೇವಡಿ ಮಾಡಿರುವ ದೇವೇಗೌಡ ಅವರು, ಯಡಿಯೂರಪ್ಪ ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಗೆಲುವು ಸಾಧಿಸಿದ ಎಲ್ಲರನ್ನೂ ಸಚಿವರನ್ನಾಗಿ ಮಾಡುತ್ತೇನೆಂದು ಹೇಳಿದ್ದರು. ಆದರೆ, ಅದು ಆಗಲಿಲ್ಲ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com