'ಡಿಕೆ ಶಿವಕುಮಾರ್  ಕೆಪಿಸಿಸಿ ಅಧ್ಯಕ್ಷರಾದರೆ ಸಿದ್ದರಾಮಯ್ಯ ಪಕ್ಷ ತೊರೆಯುತ್ತಾರೆ'

ಮುಂದಿನ ಮೂರು ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಒಡೆದು ಚೂರು ಚೂರಾಗುತ್ತದೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ಶಿವಕುಮಾರ್ ಮತ್ತು ಸಿದ್ದರಾಮಯ್ಯ
ಶಿವಕುಮಾರ್ ಮತ್ತು ಸಿದ್ದರಾಮಯ್ಯ

ಯಾದಗಿರಿ: ಮುಂದಿನ ಮೂರು ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಒಡೆದು ಚೂರು ಚೂರಾಗುತ್ತದೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೊಸ ಪಕ್ಷ ಕಟ್ಟುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ  ಕಟೀಲ್, ಎಐಸಿಸಿ ಪ್ರಧಾನ ಕಾರ್ಯದರ್ಶಿ  ವೇಣುಗೋಪಾಲ್  ಸೋನಿಯಾ ಗಾಂಧಿ ಅವರ ಜೊತೆ ಚರ್ಚೆ ನಡೆಸಿದ್ದಾರೆ. ಈ ಸಂಬಂಧ ರಾಜ್ಯ ನಾಯಕರುಗಳ ಜೊತೆಯೂ ಚರ್ಚಿಸಿದ್ದಾರೆ, ಆದರೆ ಇದುವರೆಗೂ ಫಲಿತಾಂಶ ಮಾತ್ರ ಹೊರ ಬಿದ್ದಿಲ್ಲ ಎಂದು ಹೇಳಿದ್ದಾರೆ.

ಎಐಸಿಸಿ ಪ್ರದೇಶ ಕಾಂಗ್ರೆಸ್ ಸಮಿತಿಗೆ ಅಧ್ಯಕ್ಷರನ್ನಾಗಿ ಡಿಕೆ ಶಿವಕುಮಾರ್ ಅವರನ್ನು ನೇಮಿಸಿದರೇ ಸಿದ್ದರಾಮಯ್ಯ ಪಕ್ಷ ತೊರೆಯುತ್ತಾರೆ. ಒಂದು ವೇಳೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಸಮಾಧಾನ ಪಡಿಸುವಲ್ಲಿ ಎಐಸಿಸಿ ಯಶಸ್ವಿಯಾದರೇ ಪರಮೇಶ್ವರ ಪಕ್ಷ ತೊರೆಯುತ್ತಾರೆ ಎಂದು ಕಟೀಲ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com