ಆನಂದ್ ಸಿಂಗ್  ರಿಂದ ಸರ್ಕಾರಕ್ಕೆ ವಂಚನೆ: ದಾಖಲೆ ಬಿಡುಗಡೆ ಮಾಡಿದ ಉಗ್ರಪ್ಪ

ಅರಣ್ಯ ಸಚಿವ ಆನಂದ್‌ ಸಿಂಗ್‌ ವಿರುದ್ಧ ದಾಖಲಾಗಿರುವ ಪ್ರಕರಣದ ದಾಖಲೆಗಳನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ  ಹಾಗೂ ಬಳ್ಳಾರಿ ಮಾಜಿ ಸಂಸದ ವಿ.ಎಸ್‌ ಉಗ್ರಪ್ಪ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಉಗ್ರಪ್ಪ
ಉಗ್ರಪ್ಪ

ಬೆಂಗಳೂರು: ಅರಣ್ಯ ಸಚಿವ ಆನಂದ್‌ ಸಿಂಗ್‌ ವಿರುದ್ಧ ದಾಖಲಾಗಿರುವ ಪ್ರಕರಣದ ದಾಖಲೆಗಳನ್ನು ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ  ಹಾಗೂ ಬಳ್ಳಾರಿ ಮಾಜಿ ಸಂಸದ ವಿ.ಎಸ್‌ ಉಗ್ರಪ್ಪ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಕರಣಗಳ ಕುರಿತಾದ ದಾಖಲೆಯನ್ನು ಅವರು ಬಿಡುಗಡೆಗೊಳಿಸಿದರು. ಸಚಿವ ಆನಂದ್ ಸಿಂಗ್ ವಿರುದ್ಧ ಒಟ್ಟು 14 ಪ್ರಕರಣಗಳು ದಾಖಲಾಗಿದ್ದು, ಎಲ್ಲವೂ ಅರಣ್ಯ ಇಲಾಖೆಗೆ ಸಂಬಂಧಿಸಿದಾಗಿದೆ.

ಇವುಗಳ ಪೈಕಿ 7 ಪ್ರಕರಣದಲ್ಲಿ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಹೀಗಿದ್ದರೂ ಆನಂದ್‌ ಸಿಂಗ್‌ ಅವರಿಗೆ ಅರಣ್ಯ ಖಾತೆಯನ್ನು ನೀಡಲಾಗಿದೆ ಎಂದು ಉಗ್ರಪ್ಪ ಆಕ್ಷೇಪ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ರಹಿತ, ಪಾರದರ್ಶಕ ಆಡಳಿತದ ಭರವಸೆ ನೀಡುವ ಪ್ರಧಾನಿ ಈ ಕೂಡಲೇ ಆನಂದ್ ಸಿಂಗ್ ವಿರುದ್ಧ ಕ್ರಮಕೈಗೊಳ್ಳುವಂತೆ ಬಿಎಸ್‌ವೈ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಆನಂದ್‌ ಸಿಂಗ್ ವಿರುದ್ಧ ಇಷ್ಟೆಲ್ಲಾ ಗಂಭೀರ ಸ್ವರೂಪದ ಆರೋಪಗಳು ಇದ್ದರೂ ಸರ್ಕಾರ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿದೆ. ಸಿಂಗ್ ಅವರಿಗೆ ಅರಣ್ಯ ಖಾತೆಯನ್ನು ನೀಡುವ ಮೂಲಕ ಸರ್ಕಾರ ತೋಳವನ್ನೇ ಕುರಿ ಕಾಯಲು ಬಿಟ್ಟಂತೆ ಆಗಿದೆ. ಸರ್ಕಾರ ಕಥೆಗಳು, ಕಾರಣಗಳನ್ನು ಹೇಳದೆ ಆನಂದ್ ಸಿಂಗ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಿ ಎಂದು ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com