ಯತ್ನಾಳ್ ಬಹಿರಂಗ ಕ್ಷಮೆಯಾಚಿಸದಿದ್ದರೆ ಅಧಿವೇಶನ ನಡೆಯಲು ಬಿಡುವುದಿಲ್ಲ: ಈಶ್ವರ್ ಖಂಡ್ರೆ

ಇದೇ ಸೋಮವಾರದಿಂದ ಮುಂದುವರೆಯಲಿರುವ ವಿಧಾನಮಂಡಲ ಅಧಿವೇಶನದ ಎರಡೂ ಸದನಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್, ದೊರೆಸ್ವಾಮಿ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಅವಹೇಳನಕಾರಿ ಹೇಳಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಬಿಜೆಪಿಯ ನಡೆ ವಿರೋಧಿಸಿ ಕಾಂಗ್ರೆಸ್ ಧ್ವನಿಯೆತ್ತಲಿದೆ.

Published: 28th February 2020 01:55 PM  |   Last Updated: 28th February 2020 01:55 PM   |  A+A-


ಈಶ್ವರ ಖಂಡ್ರೆ ಮತ್ತು ಬಸನಗೌಡ ಪಾಟೀಲ್ ಯತ್ನಾಳ್

Posted By : Raghavendra Adiga
Source : UNI

ಬೆಂಗಳೂರು:  ಇದೇ ಸೋಮವಾರದಿಂದ ಮುಂದುವರೆಯಲಿರುವ ವಿಧಾನಮಂಡಲ ಅಧಿವೇಶನದ ಎರಡೂ ಸದನಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್, ದೊರೆಸ್ವಾಮಿ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಅವಹೇಳನಕಾರಿ ಹೇಳಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಬಿಜೆಪಿಯ ನಡೆ ವಿರೋಧಿಸಿ ಕಾಂಗ್ರೆಸ್ ಧ್ವನಿಯೆತ್ತಲಿದೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರನ್ನು ನಿಂದಿಸಿದಕ್ಕಾಗಿ ಬಿಜೆಪಿ ಸರ್ಕಾರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗ ಕ್ಷಮೆಯಾಚಿಸದೇ ಇದ್ದಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಎಚ್ಚರಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೊರೆಸ್ವಾಮಿ ಯಾವುದೇ ಪಕ್ಷಕ್ಕೆ ಸೇರಿದವರಲ್ಲ. ಎಲ್ಲಾ ಸರ್ಕಾರಗಳ ಕಾಲದಲ್ಲಿಯೂ ಅವರು ಜನಪರ ಹೋರಾಟಗಳನ್ನು ಮಾಡುತ್ತಾ ಬಂದಿದ್ದಾರೆ. ಇಂತಹ ವ್ಯಕ್ತಿ ಬಗ್ಗೆ ಯಾರೇ ಅವಹೇಳನಕಾರಿ ಹೇಳಿಕೆ ನೀಡುವುದಾಗಲೀ ಹಗುರವಾಗಿ ಮಾತನಾಡುವುದಾಗಲೀ ಮಾಡಬಾರದು ಎಂದು ಕಿಡಿಕಾರಿದರು.

Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp